ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಜಾಲ್ನಾ– ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಂಚಾರಕ್ಕೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರುವರು ಎಂದು ಕೇಂದ್ರೀಯ ರೈಲ್ವೆ ಅಧಿಕಾರಿ ಹೇಳಿದ್ದಾರೆ.
ಮರುಅಭಿವೃದ್ಧಿಗೊಂಡ ಅಯೋಧ್ಯಾ ಧಾಮ್ ರೈಲು ನಿಲ್ದಾಣದಲ್ಲಿ ನಡೆಯುವ ಸಮಾರಂಭದಲ್ಲಿ ಎರಡು ಅಮೃತ್ ಭಾರತ್ ರೈಲುಗಳು ಮತ್ತು ಇತರ ಐದು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗೆ ಕೂಡ ಅವರು ಹಸಿರು ನಿಶಾನೆ ತೋರುವರು.
ಜಾಲ್ನಾ– ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮಹಾರಾಷ್ಟ್ರದ 7ನೇ ವಂದೇ ಭಾರತ್ ರೈಲು ಆಗಿದ್ದು ಮುಂಬೈನಿಂದ ಸಂಚರಿಸುವ ಐದನೇ ವಂದೇ ಭಾರತ್ ಸೇವೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.