ನವದೆಹಲಿ: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಶೀಘ್ರ ಗುಣಮುಖರಾಗಲಿ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.
ಗುರುವಾರ ರಾತ್ರಿ ಬಿದ್ದು ಗಾಯಗೊಂಡಿರುವ ರಾವ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
‘ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರಿಗೆ ಗಾಯವಾಗಿದೆ ಎಂದು ತಿಳಿದು ಬೇಸರವಾಗಿದೆ. ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹೈದರಾಬಾದ್‌ನ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾವ್ ಅವರ ಮೂಳೆ ಮುರಿದಿರುವ ಶಂಕೆಗಳಿವೆ ಎಂದು ಅವರ ಕಚೇರಿ ಮೂಲಗಳು ತಿಳಿಸಿವೆ.
69 ವರ್ಷದ ಬಿಆರ್‌ಎಸ್ ಅಧ್ಯಕ್ಷ ರಾವ್ ಅವರ ಸ್ಥಿತಿಯನ್ನು ವೈದ್ಯರು ಪರೀಕ್ಷಿಸುತ್ತಿದ್ದಾರೆ, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿರಬಹುದು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.