ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾಣಿಜ್ಯ ನಗರಿ ಮುಂಬೈಯ ರಸ್ತೆ, ರೈಲ್ವೆ, ಬಂದರು ವಲಯಗಳಲ್ಲಿ ₹29,000 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, 'ಮಹಾರಾಷ್ಟ್ರವನ್ನು ವಿಶ್ವದ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಮತ್ತು ಮುಂಬೈಯನ್ನು ಜಾಗತಿಕ 'ಫಿನ್‌ಟೆಕ್' ರಾಜಧಾನಿಯನ್ನಾಗಿ ಮಾಡುವುದು ನನ್ನ ಗುರಿಯಾಗಿದೆ' ಎಂದು ಹೇಳಿದ್ದಾರೆ.
ಅವಳಿ ಸುರಂಗ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದರಲ್ಲಿ ₹16,600 ಕೋಟಿ ಮೌಲ್ಯದ ಥಾಣೆ-ಬೊರಿವಲಿ ಸುರಂಗ ಮಾರ್ಗದ ಯೋಜನೆ ಹಾಗೂ ₹6,300 ಕೋಟಿ ಮೌಲ್ಯದ ಗೋರೆಗಾಂವ್-ಮುಲುಂಡ್ ಲಿಂಕ್ ರೋಡ್ (ಜಿಎಂಎಲ್‌ಆರ್) ಸುರಂಗ ಯೋಜನೆ ಒಳಗೊಂಡಿದೆ.
₹5,600 ಕೋಟಿ ಮೌಲ್ಯದ 'ಮುಖ್ಯಮಂತ್ರಿ ಯುವ ಕಾರ್ಯ ಪ್ರಶಿಕ್ಷಣ ಯೋಜನೆ'ಗೂ ಪ್ರಧಾನಿ ಚಾಲನೆ ನೀಡಿದ್ದಾರೆ.
ಲೋಕಮಾನ್ಯ ತಿಲಕ್ ಟರ್ಮಿನಸ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಲ್ಲಿ ಹೊಸ ಫ್ಲ್ಯಾಟ್‌ಫಾರ್ಮ್ ಅನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.