ಪಟ್ನಾ(ಬಿಹಾರ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಗುರುದ್ವಾರದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.
ಕೇಸರಿ ಬಣ್ಣದ ಪೇಟ ಧರಿಸಿ ಪ್ರಾರ್ಥನೆ ಸಲ್ಲಿಸಿದ ಮೋದಿ ಅವರು, ಗುರದ್ವಾರದ ಭೋಜನ ಶಾಲೆಯಲ್ಲಿ ಸ್ವಲ್ಪ ಸಮಯ ಕಳೆದಿದ್ದಾರೆ. ಅನ್ನಸಂತರ್ಪಣೆಯಲ್ಲಿ(ಲಂಗರ್) ಭಾಗಿಯಾದ ಅವರು ಸ್ಟೀಲ್ ಬಕೆಟ್ ಹಿಡಿದು ಭಕ್ತರಿಗೆ ಆಹಾರ ಬಡಿಸಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಇದಕ್ಕೂ ಮುನ್ನ ಭಾನುವಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಮತ್ತು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಅವರೊಂದಿಗೆ ಪ್ರಧಾನಿ ಪಾಟ್ನಾದಲ್ಲಿ ರೋಡ್ ಶೋ ನಡೆಸಿದ್ದರು.
ಸಂಸತ್ತಿಗೆ ಅತಿ ಹೆಚ್ಚು ಸಂಸದರನ್ನು ಕಳುಹಿಸುವ ರಾಜ್ಯಗಳಲ್ಲಿ ಬಿಹಾರವೂ ಒಂದು. ಬಿಹಾರವು 40 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ರಾಷ್ಟ್ರರಾಜಕಾರಣದಲ್ಲಿ ಮಹತ್ವದ ಪಾತ್ರ ಹೊಂದಿದೆ. ಈ ಬಾರಿ ಏಳು ಹಂತಗಳಲ್ಲಿಯೂ ಇಲ್ಲಿ ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.