ನವದೆಹಲಿ: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಯೋತ್ಪಾದಕರೇ ನಿಯಂತ್ರಿಸುತ್ತಾರೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಶುಕ್ರವಾರ ಹೇಳಿದ್ದಾರೆ.
ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರವನ್ನು ರದ್ದುಗೊಳಿಸಿರುವ ಭಾರತ ಕ್ರಮವನ್ನು ಟೀಕಿಸುತ್ತಿದ್ದ ಪಾಕಿಸ್ತಾನಕ್ಕೆ ಈ ಮೂಲಕ ಅವರು ತಿರುಗೇಟು ನೀಡಿದ್ದಾರೆ.
ಪಿಒಕೆ, ಗಿಲ್ಗಿಟ್–ಬಾಲ್ಟಿಸ್ತಾನ ಪ್ರದೇಶಗಳನ್ನು ಸಹ ಪಾಕಿಸ್ತಾನ ಆಕ್ರಮಿಸಿಕೊಂಡಿದೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.