ADVERTISEMENT

ಜನಸೇನಾ ಕಾರ್ಯಕರ್ತರ ಬಂಧನ, ಮಧ್ಯರಾತ್ರಿ ಬಾಗಿಲು ಬಡಿದ ಪೊಲೀಸರು: ಪವನ್ ಕಲ್ಯಾಣ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಅಕ್ಟೋಬರ್ 2022, 6:21 IST
Last Updated 16 ಅಕ್ಟೋಬರ್ 2022, 6:21 IST
ಪವನ್ ಕಲ್ಯಾಣ್
ಪವನ್ ಕಲ್ಯಾಣ್   

ಅಮರಾವತಿ: ಆಂಧ್ರಪ್ರದೇಶದಲ್ಲಿ ಆಡಳಿತರೂಢ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ಜನಸೇನಾ ಪಕ್ಷದ ನಡುವೆ ರಾಜಕೀಯ ಕೆಸರೆರೆಚಾಟ ಜೋರಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, ‘100ಕ್ಕೂ ಹೆಚ್ಚು ಜನಸೇನಾ ಪಕ್ಷ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ‘ಜನವಾಣಿ’ ಕಾರ್ಯಕ್ರಮಕ್ಕೆ ಅನುಮತಿ ಕೇಳಿದ 15 ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ’ ಎಂದು ಸರ್ಕಾರದ ವಿರುದ್ಧ ‌ಆರೋಪಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ಪೊಲೀಸರು ಶನಿವಾರ ಮಧ್ಯರಾತ್ರಿ ನಾನು ತಂಗಿದ್ದ ಹೋಟೆಲ್ ರೂಮ್‌ಗೆ ಬಂದು ಬಾಗಿಲು ಬಡಿದರು ಎಂದು ಪವನ್ ಕಲ್ಯಾಣ್ ಹೇಳಿಕೊಂಡಿದ್ದಾರೆ.

ADVERTISEMENT

ಜಗನ್ ಮೋಹನ್‌ ರೆಡ್ಡಿ ನೇತೃತ್ವದ ಆಂಧ್ರ ಸರ್ಕಾರದ ಮೂರು ರಾಜಧಾನಿ ರಚನೆ ವಿರೋಧಿಸಿ ಪವನ್‌ ಬೆಂಬಲಿಗರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಪವನ್ ಕಲ್ಯಾಣ್ ಅವರು ಶನಿವಾರ ವಿಶಾಖಪಟ್ಟಣದಲ್ಲಿ ಬೃಹತ್ ರ್‍ಯಾಲಿ ನಡೆಸಿದ್ದಾರೆ. ರ್‍ಯಾಲಿಯಲ್ಲಿ ಸಿನಿಮಾ ಅಭಿಮಾನಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಇದಕ್ಕೂ ಮುನ್ನ ವಿಶಾಖಪಟ್ಟಣಕ್ಕೆ ತೆರಳಿದ್ದ ವೈಎಸ್‌ಆರ್‌ಸಿಪಿ ಪಕ್ಷದ ಸಚಿವೆ ರೋಜಾ ಹಾಗೂ ನಾಯಕರಾದ ಜೋಗಿ ರಮೇಶ್ ಮತ್ತು ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ಅವರ ಮೇಲೆ ಜನಸೇನಾ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.