ಇಟಾನಗರ: ಅರುಣಾಚಲ ಪ್ರದೇಶದ ಆಲ್ ನೈಶಿ ವಿದ್ಯಾರ್ಥಿ ಒಕ್ಕೂಟದ (ಎಎನ್‌ಎಸ್‌ಯು) ಹೊಸ ಕಾರ್ಯಕಾರಿ ಮಂಡಳಿಗೆ ನಡೆದ ಚುನಾವಣೆ ವೇಳೆ ಹಿಂಸಾಚಾರ ನಡೆದಿದ್ದು, ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದು, ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳಲ್ಲಿ ಒಬ್ಬರಾದ ರೋಮೇಶ್ ಮಾಗಾ ಅವರನ್ನು ಚುನಾವಣಾ ಪ್ರಕ್ರಿಯೆಯಿಂದ ಅನರ್ಹಗೊಳಿಸಲಾಗಿತ್ತು. ಇದೇ ವಿಚಾರವಾಗಿ ಹಿಂಸಾಚಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಭಟನಾಕಾರರು ಸಿದ್ಧಾರ್ಥ್ ಹಾಲ್ ಬಳಿ ಟೈರ್‌ಗಳನ್ನು ಸುಟ್ಟು, ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದು, ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಬೇಕಾಯಿತು ಎಂದು ಪೊಲೀಸ್ ಅಧಿಕಾರಿ ರೋಹಿತ್ ರಾಜ್ಬೀರ್ ಸಿಂಗ್ ಹೇಳಿದ್ದಾರೆ.
ಘಟನೆ ಸಂಬಂಧ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮತದಾನ ಪ್ರಕ್ರಿಯೆ ಸುಗಮವಾಗಿ ಸಾಗಿದೆ ಎಂದು ಇಟಾನಗರದ ಎಸ್‌ಪಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.