ADVERTISEMENT

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪೊಲೀಸರಿಂದ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 9:41 IST
Last Updated 5 ಮಾರ್ಚ್ 2023, 9:41 IST
ಅಣ್ಣಾಮಲೈ
ಅಣ್ಣಾಮಲೈ    

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗೆ ಆಡಳಿತಾರೂಢ ಡಿಎಂಕೆ ಪಕ್ಷವೇ ಕಾರಣ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ಹಿಂಸಾಚಾರ ಪ್ರಚೋದನೆ ಹಾಗೂ ದ್ವೇಷ ಬಿತ್ತುವ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಮಿಳುನಾಡು ಸೈಬರ್‌ ಕ್ರೈಂ ವಿಭಾಗ ಅಣ್ಣಾಮಲೈ, ಬಿಹಾರದ ಕೆಲವು ಬಿಜೆಪಿಯ ಟ್ವಿಟರ್ ಖಾತೆದಾರರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಆದರೆ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ಡಿಎಂಕೆ ಹಾಗೂ ಅದರ ಮೈತ್ರಿ ಪಕ್ಷದ ನಾಯಕರು ಅವರ ಮೇಲಿನ ದ್ವೇಷಕ್ಕೆ ಕಾರಣವಾಗುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.

ADVERTISEMENT

ಈ ಬಗ್ಗೆ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರ ಹಾಗೂ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.