ಚಂಡೀಗಢ: ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಕಚೇರಿ ಕಡೆ ತೆರಳುತ್ತಿದ್ದ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಬುಧವಾರ ಜಲಫಿರಂಗಿ ಬಳಸಿ, ಲಾಠಿ ಚಾರ್ಜ್ ನಡೆಸಿದರು.
ಎನ್‌ಎಸ್‌ಯುಐ ಚಂಡೀಗಢ ಅಧ್ಯಕ್ಷ ಸಚಿನ್ ಗಲವ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಮೇಯರ್ ಚುನಾವಣೆಯಲ್ಲಿ ಮತಪತ್ರಗಳನ್ನು ತಿದ್ದಿದ ಆರೋಪ ಹೊತ್ತಿರುವ ಚುನಾವಣಾಧಿಕಾರಿ ಅನಿಲ್ ಮಾಸಿಹ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಇಲ್ಲಿನ ಸೆಕ್ಟರ್ 35ರಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯೋಜನೆ ರೂಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಚೇರಿಯ ಸುತ್ತಮುತ್ತ ಭಾರಿ ಭದ್ರತೆ ಏರ್ಪಡಿಸಲಾಗಿತ್ತು. ಪ್ರತಿಭಟನಾಕಾರರು ಬಿಜೆಪಿ ಕಚೇರಿ ಕಡೆ ತೆರಳದಂತೆ ಬ್ಯಾರಿಕೇಡ್‌ಗಳನ್ನು ಹಾಕಿ, ಪೊಲೀಸ್ ಪಡೆ ನಿಯೋಜಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.