ಜಮ್ಮು: ಗೋ– ಹತ್ಯೆಗೆ ಸಂಬಂಧಿಸಿದಂತೆ ವದಂತಿಗಳನ್ನು ಹರಡದಂತೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯ ಪೊಲೀಸರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ಕಿಶ್ತ್‌ವಾರ್ ಜಿಲ್ಲೆಯಲ್ಲಿ ಇತ್ತೀಚೆಗೆ ಗೋ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಇಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲಿಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಗಲ್ಹಾರ್ ಗ್ರಾಮದಲ್ಲಿ ಮೊಹಮದ್ ಯೂಸಫ್ ಎಂಬುವರ ಗೋವೊಂದು ಹಾವು ಕಡಿತದಿಂದ ಮೃತಪಟ್ಟಿತ್ತು. ಅದರ ಮೃತ ದೇಹವನ್ನು ಸಮೀಪದ ಮೈದಾನದಲ್ಲಿ ಇರಿಸಿದ್ದಾಗ ನಾಯಿಗಳು ದಾಳಿಯಿಟ್ಟಿವೆ. ಕೆಲ ಕಿಡಿಗೇಡಿಗಳು ಈ ವೇಳೆ ಫೋಟೊಗಳನ್ನು ತೆಗೆದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಕೋಮು ಗಲಭೆಯನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿರುವುದು ಸ್ಪಷ್ಟವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.