ಪೆಶಾವರ: ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸರೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ವಾಯವ್ಯ ಪಾಕಿಸ್ತಾನದಲ್ಲಿ ಪೋಲಿಯೊ ಕಾರ್ಯಕರ್ತರಿಗೆ ಭದ್ರತೆ ಒದಗಿಸಲು ಇವರನ್ನು ನಿಯೋಜಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಇಮ್ರಾನ್ ಖಾನ್ ಮೃತಪಟ್ಟವರು. ದಾಳಿ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಪೋಲಿಯೊ ಲಸಿಕೆ ಹಾಕಿಸುವುದರಿಂದ ಸಂತಾನ ಶಕ್ತಿ ಕ್ಷೀಣಿಸುತ್ತದೆ ಎಂಬುದು ಉಗ್ರರ ಆರೋಪ. ಹೀಗಾಗಿ ಪೋಲಿಯೊ ಆಂದೋಲನವನ್ನು ವಿರೋಧಿಸುತ್ತಲೇಬಂದಿದ್ದಾರೆ.
ಏಪ್ರಿಲ್ ಮೊದಲ ವಾರದಲ್ಲಿ ಪೋಲಿಯೊ ಆಂದೋಲನದ ಸದಸ್ಯನನ್ನು ಗುಂಡಿಕ್ಕಿ ಉಗ್ರರು ಹತ್ಯೆ ಮಾಡಿದ್ದರು. 2012ರಿಂದ ಇಲ್ಲಿಯವರೆಗೆ 68 ಮಂದಿ ಪೋಲಿಯೊ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ.
ಅಫ್ಗಾನಿಸ್ತಾನ, ನೈಜೀರಿಯಾ ಮತ್ತು ಪಾಕಿಸ್ತಾನದಲ್ಲಿ ಪೋಲಿಯೊ ಪೀಡಿತರು ಅಧಿಕ ಸಂಖ್ಯೆಯಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಪೋಲಿಯೊ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.