ADVERTISEMENT

ಹೊಸ ಸರ್ಕಾರದ ಪ್ರಮಾಣವಚನಕ್ಕೆ ಗಣ್ಯರ ಸಾಕ್ಷಿ

ಪಿಟಿಐ
Published 9 ಜೂನ್ 2024, 0:13 IST
Last Updated 9 ಜೂನ್ 2024, 0:13 IST
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ    

ನವದೆಹಲಿ: ಸರ್ಕಾರದ ಮೂಲಗಳ ಪ್ರಕಾರ, ಭಾನುವಾರ ಸಂಜೆ ನಡೆಯುವ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಲವು ಗಣ್ಯರು ಸಾಕ್ಷಿಯಾಗುವುದು ನಿಚ್ಚಳವಾಗಿದೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಶನಿವಾರವೇ ಭಾರತಕ್ಕೆ ಬಂದಿಳಿದಿದ್ದಾರೆ. ಅವರಲ್ಲದೆ ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ಶೆರಿಂಗ್ ಟೋಬಗೆ, ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಮಾರಿಷಸ್‌ ಪ್ರಧಾನಿ ಪ್ರವಿಂದ ಕುಮಾರ್ ಜಗನ್ನಾಥ್ ಸೇರಿ ಹಲವು ರಾಷ್ಟ್ರಗಳ ಗಣ್ಯರು ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಾಜರಿರುವರು ಎಂದು ಮೂಲಗಳು ವಿವರಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT