ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ಮುಖ್ಯಮಂತ್ರಿ ಅತಿಶಿ ಆದೇಶಿಸಿದ್ದಾರೆ.
ಈ ಆದೇಶದನ್ವಯ ದೆಹಲಿ ಮಹಾನಗರ ಪಾಲಿಕೆಯು ಬೆಳಿಗ್ಗೆ 8.30ರಿಂದ ಸಂಜೆ 5ರವರೆಗೆ, ಕೇಂದ್ರ ಸರ್ಕಾರಿ ಕಚೇರಿಗಳು ಬೆಳಿಗ್ಗೆ 9ರಿಂದ ಸಂಜೆ 5.30 ಹಾಗೂ ದೆಹಲಿ ಸರ್ಕಾರದ ಕಚೇರಿಗಳು ಬೆಳಿಗ್ಗೆ 10ರಿಂದ ಸಂಜೆ 6.30ರವರೆಗೆ ಕಾರ್ಯ ನಿರ್ವಹಿಸಲಿವೆ ಎಂದು ಅತಿಶಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹೇಳಿದ್ದಾರೆ.
ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀರಾ ಹದಗೆಟ್ಟಿದೆ ಎಂದು ಗಾಳಿಯ ಗುಣಮಟ್ಟ ನಿರ್ವಹಣಾ ಆಯೋಗವು (CAQM) ಹೇಳಿದೆ. ಕಳೆದ ಎರಡು ದಿನಗಳಿಂದ ಇದು ಅಪಾಯಕಾರಿ ಮಟ್ಟ ತಲುಪಿದ್ದು, GRAP 3 ಕ್ರಮ ಜಾರಿಗೊಳಿಸಿದೆ.
ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ಶುಕ್ರವಾರ 411 ಎಕ್ಯೂಐ ಇತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.