ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನುಸುಳುಕೋರರನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಹಿಂದೂಗಳು ಮತ್ತು ಆದಿವಾಸಿಗಳ ಜನಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆಯ ಸಮರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರವು ಒಳ ನುಸುಳುಕೋರರನ್ನು ಬೆಂಬಲಿಸಿದೆ. ಈ ಮೂಲಕ ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ. ಇದು ರಾಜ್ಯದ ಸಂಸ್ಕೃತಿ, ಪರಂಪರೆ ಮತ್ತು ಘನತೆಗೆ ಧಕ್ಕೆಯಾಗಿದೆ ಎಂದು ಕಿಡಿಕಾರಿದ್ದಾರೆ.
ಹೆಣ್ಣು, ಹೊನ್ನು, ಮಣ್ಣು ರಕ್ಷಿಸುವುದರ ಜತೆಗೆ ರಾಜ್ಯದಿಂದ ಕೆಟ್ಟ ಶಕ್ತಿಗಳನ್ನು ಹೊರಹಾಕಲು ಸಮಯ ಬಂದಿದೆ ಎಂದು ಪ್ರತಿಪಾದಿಸಿದರು.
ಅಬಕಾರಿ ಕಾನ್ಸ್‌ಟೇಬಲ್‌ಗಳ ನೇಮಕಾತಿಯ ವೇಳೆ ಹಲವು ಆಕಾಂಕ್ಷಿಗಳ ಸಾವು ಸೇರಿದಂತೆ ರಾಜ್ಯದ ಭ್ರಷ್ಟಾಚಾರ ಬಗ್ಗೆ ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡು ವಾರಗಳಲ್ಲಿ ಮೋದಿಯವರ ಎರಡನೇ ಜಾರ್ಖಂಡ್ ಭೇಟಿ ಇದಾಗಿದೆ. 81 ಸದಸ್ಯರ ಬಲ ಹೊಂದಿರುವ ಜಾರ್ಖಂಡ್ ವಿಧಾನಸಭೆಯ ಅಧಿಕಾರಾವಧಿಯು 2025ರ ಜನವರಿ 5ಕ್ಕೆ ಮುಕ್ತಾಯಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.