ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ–313 ಬಳಿ ಭಾರಿ ಭೂಕುಸಿತ ಸಂಭವಿಸಿದ್ದು, ಹೆದ್ದಾರಿ ಕುಸಿದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಬುಧವಾರ ರಾತ್ರಿ ಭೂಕುಸಿತ ಸಂಭವಿಸಿದ ಹಿನ್ನೆಲೆ ದಿಬಾಂಗ್ ವ್ಯಾಲಿ ಜಿಲ್ಲೆಯ ಹುನಲಿ, ಅನಿನಿ ಪ್ರದೇಶಕ್ಕೆ ಸಾಗುವ ರಸ್ತೆಗಳು ಸಂಪೂರ್ಣ ಹಾನಿಗೀಡಾಗಿವೆ. ಈ ಜಿಲ್ಲೆಯನ್ನು ಸಂಪರ್ಕಿಸಲು ಇರುವುದು ಇದೊಂದೆ ರಸ್ತೆಯಾಗಿತ್ತು. ಆದರೆ ರಸ್ತೆ ಕುಸಿತದಿಂದಾಗಿ ದಿಬಾಂಗ್ ಜಿಲ್ಲೆಯ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಈ ಕುರಿತು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪ್ರೇಮಾ ಖಂಡು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹಾನಿಗೀಡಾದ ರಸ್ತೆಗಳ ದುರಸ್ತಿಗೆ ಜಿಲ್ಲಾಡಳಿತ ಕಾರ್ಮಿಕರನ್ನು ಮತ್ತು ಯಂತ್ರಗಳನ್ನು ಸ್ಥಳಕ್ಕೆ ಕಳುಹಿಸಿದ್ದು, ಕೆಲಸ ಪೂರ್ಣಗೊಳ್ಳಲು ಕೆಲವು ದಿನಗಳು ಬೇಕಾಗಬಹುದು ಎಂದು ಅನಿನಿ ಪ್ರದೇಶದ ಜಿಲ್ಲಾಧಿಕಾರಿ ದುರ್ಬಜ್ಯೋತಿ ಬೋರಾಹ್ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.