ಬ್ಯಾಂಕಾಕ್‌ನಲ್ಲಿ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರದ ಅಂತ್ಯಸಂಸ್ಕಾರ, ಬಿಜೆಪಿ ರಾಜಕಾರಣದಿಂದ ಮಣಿಪುರದಲ್ಲಿ 'ಭಾರತ ಮಾತೆ'ಯ ಕೊಲೆ ಆಗಿದೆ ಎಂದು ರಾಹುಲ್ ಗಾಂಧಿ ಆರೋಪ, ಕ್ವಿಟ್ ಇಂಡಿಯಾ: ವಿಪಕ್ಷಗಳ ವಿರುದ್ಧ ನರೇಂದ್ರ ಮೋದಿ ವಾಗ್ದಾಳಿ. ಇವೇ ಮುಂತಾದ ದಿನದ ಟಾಪ್ 10 ಸುದ್ದಿಗಳನ್ನು ಓದಿ..
ಬ್ಯಾಂಕಾಕ್‌ನಲ್ಲಿ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತು. ಪತಿ ವಿಜಯ ರಾಘವೇಂದ್ರ ಮತ್ತು ಮಗ ಶೌರ್ಯ ಅಂತಿಮ ವಿಧಿ ವಿಧಾನ ನೆರವೇರಿಸಿದರು.
ಓದಲು..
ಲೋಕಸಭೆಯಲ್ಲಿ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ರಾಜಕೀಯದಿಂದ ಮಣಿಪುರದಲ್ಲಿ 'ಭಾರತ ಮಾತೆ'ಯ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಓದಲು..
ಬಿಜೆಪಿ ರಾಜಕಾರಣದಿಂದ ಮಣಿಪುರದಲ್ಲಿ 'ಭಾರತ ಮಾತೆ'ಯ ಕೊಲೆ: ರಾಹುಲ್ ಗಾಂಧಿ
ನವದೆಹಲಿ: ‘ಭ್ರಷ್ಟಾಚಾರ, ವಂಶಾಡಳಿತ ಹಾಗೂ ಓಲೈಸುವಿಕೆಯ ರಾಜಕಾರಣದ ವಿರುದ್ಧ ಭಾರತ ಒಂದೇ ಧ್ವನಿಯಲ್ಲಿ ಮಾತನಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಹಾತ್ಮಗಾಂಧಿ ಅವರು ನಡೆಸಿದ್ದ ಕ್ವಿಟ್ ಇಂಡಿಯಾ ಚಳವಳಿಯನ್ನು ಅವರು ಸ್ಮರಿಸಿದ್ದಾರೆ.
ಓದಲು..
ಈ ವರ್ಷದ ಆನೆ ಗಣತಿ ವರದಿ ಪ್ರಕಾರ, ರಾಜ್ಯದಲ್ಲಿ ಪ್ರಸ್ತುತ 6,395 ಆನೆಗಳಿವೆ. ಹುಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕವು, ಆನೆಗಳ ಸಂಖ್ಯೆಯಲ್ಲಿ ದೇಶದಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.
ಓದಲು..
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ವಿರುದ್ಧ ಕೃಷಿ ಸಹಾಯಕ ನಿರ್ದೇಶಕರು ರಾಜ್ಯಪಾಲರಿಗೆ ನೀಡಿದ್ದಾರೆ ಎನ್ನಲಾದ ದೂರಿನ ಸಂಬಂಧ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಮಂಡ್ಯ ನಗರದ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಓದಲು..
ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ ನಲ್ಲಿ ಕಾರು ನಿಲ್ಲಿಸಿ ಅದರಲ್ಲಿಯೇ ಸಾಕುನಾಯಿ ಬಿಟ್ಟು ಲಾಕ್ ಮಾಡಿ ಕೊಯಮುತ್ತೂರಿಗೆ ಹೋಗಿದ್ದಾರೆ.
ಓದಲು..
ಕೇರಳ ರಾಜ್ಯದ ಪನಮರಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ವರ್ಷದ ಹಿಂದೆ 19 ವರ್ಷದ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ, ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿಗಳು ವಶಕ್ಕೆ ಪಡೆದು ಮಂಗಳವಾರ ರಾತ್ರಿ ಕೇರಳ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ.
ಓದಲು..
ಕೇರಳ ರಾಜ್ಯವನ್ನು ‘ಕೇರಳಂ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ಕೇಂದ್ರ ಸರ್ಕಾರವನ್ನು ಕೋರಿ ಮಂಡಿಸಲಾದ ನಿಲುವಳಿಗೆ ಕೇರಳ ವಿಧಾನಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ. ಸಂವಿಧಾನದ ಎಂಟನೇ ಪರಿಚ್ಛೇದ ಸೇರಿ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಬೇಕು ಎನ್ನುವ ನಿಲುವಳಿಯನ್ನು ಮುಖ್ಯಮಂತ್ರಿ ಪಿನಾರಾಯಿ ವಿಜಯನ್ ಅವರು ಮಂಡಿಸಿದ್ದರು.
ಓದಲು..
ರಕ್ತದ ಕ್ಯಾನ್ಸರ್(ಲುಕೇಮಿಯಾ) ನಿಂದ ಬಳಲುತ್ತಿದ್ದ 10 ವರ್ಷದ ಹುಡುಗಿಯೊಬ್ಬಳು ಸಾಯುವುದಕ್ಕೂ ಮುನ್ನ ತನ್ನ ಬಾಲ್ಯದ ಗೆಳೆಯನನ್ನು ಮದುವೆಯಾಗಿದ್ದಾಳೆ. ಅಮೆರಿಕದ ಎಮ್ಮಾ ಎಡ್ವರ್ಡ್ಸ್ ಕಳೆದ ವರ್ಷ ಏಪ್ರಿಲ್‌ನಲ್ಲಿ ‘ಅಕ್ಯುಟ್ ಲಿಂಫೋಬ್ಲಾಸ್ಟಿಕ್ ಲುಕೇಮಿಯಾ’ಕ್ಕೆ ತುತ್ತಾಗಿದ್ದಳು. ಇದೊಂದು ಗುಣಪಡಿಸಲಾಗದ ಕಾಯಿಲೆಯಾಗಿದೆ. ಮಗಳ ಸ್ಥಿತಿ ಕಂಡು ಚಿಂತಾಜನಕರಾದ ಪೋಷಕರು ಆಕೆಯ ಕೊನೆ ಆಸೆ ಪೂರೈಸಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.
ಓದಲು..
ಕೈಮುಗಿದು ಪ್ರಾರ್ಥಿಸುತ್ತೇನೆ ಹಿಂಸೆಯನ್ನು ನಿಲ್ಲಿಸಿ ಎಂದು ಮಣಿಪುರದ ಮೈತೇಯಿ ಮತ್ತು ಕುಕಿ ಸಮುದಾಯಗಳಿಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ವೇಳೆ ಮಣಿಪುರ ಹಿಂಸಾಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಹಿಂಸಾಚಾರದಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಕೈಮುಗಿದು ಪ್ರಾರ್ಥಿಸುತ್ತೇನೆ. ಮಣಿಪುರದಲ್ಲಿ ಶಾಮತಿ ಮರುಸ್ಥಾಪಿಸುವ ವಾಗ್ಧಾನವನ್ನು ನಾವು ಮಾಡುತ್ತೇವೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಶಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.