ADVERTISEMENT

ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿಗೆ ಪ್ರಕ್ರಿಯೆ ಆರಂಭ

ಪಿಟಿಐ
Published 23 ಮೇ 2024, 14:02 IST
Last Updated 23 ಮೇ 2024, 14:02 IST
<div class="paragraphs"><p>ಪ್ರಜ್ವಲ್‌ ರೇವಣ್ಣ</p></div>

ಪ್ರಜ್ವಲ್‌ ರೇವಣ್ಣ

   

ನವದೆಹಲಿ: ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆಯನ್ನು ವಿದೇಶಾಂಗ ಸಚಿವಾಲಯ ಆರಂಭಿಸಿದೆ. ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಕರ್ನಾಟಕ ಸರ್ಕಾರವು ಕೋರಿಕೊಂಡಿತ್ತು. ಈ ಕೋರಿಕೆಯ ಮೇರೆಗೆ ಸಚಿವಾಲಯವು ಪ್ರಕ್ರಿಯೆ ಆರಂಭಿಸಿದೆ.

ಕರ್ನಾಟಕದಿಂದ ಈ ಕುರಿತು ಪತ್ರ ಬಂದಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿ ವರ್ಗದ ಮೂಲಗಳು ಮಾಹಿತಿ ನೀಡಿವೆ. ‘ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೂ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಬುಧವಾರವಷ್ಟೇ ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.