ADVERTISEMENT

ಸುಗಮ ಸಂಸತ್ ಕಲಾಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮನವಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 9:11 IST
Last Updated 17 ನವೆಂಬರ್ 2019, 9:11 IST
   

ನವದೆಹಲಿ: ನಾಳೆಯಿಂದ ಆರಂಭಗೊಳ್ಳಲಿರುವ ಚಳಿಗಾಲ ಅಧಿವೇಶನಕ್ಕೂ ಮುನ್ನ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಸುಗಮ ಕಲಾಪಕ್ಕೆ ಮನವಿ ಮಾಡಲಾಯಿತು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿಅವರು ಕರೆದಿದ್ದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಅವರುಸುಗಮ ಕಲಾಪಕ್ಕೆ ಸಹಕರಿಸುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ಪೌರತ್ವ ಮಸೂದೆ, ಅಯೋಧ್ಯೆ ಕಾಯ್ದೆ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಆ ಮೂಲಕ ಚುನಾವಣೆಗೂ ಮುನ್ನ ತಾನು ನೀಡಿದ್ದ ಭರವಸೆಗಳನ್ನು ಈಡೇರಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂದಾಗಿದೆ.

ಆರ್ಥಿಕ ಹಿಂಜರಿತ, ನಿರುದ್ಯೋಗ ಸಮಸ್ಯೆ, ಕಾಶ್ಮೀರ ಪರಿಸ್ಥಿತಿ ಮತ್ತು ದೆಹಲಿ ಮಾಲಿನ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳು ನಿರ್ಧರಿಸಿವೆ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.