ನವದೆಹಲಿ: ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಯಶಸ್ವಿಯಾಗಿ ನಡೆದಿದೆ. ಈ ಮೂಲಕ ‘ಭವಿಷ್ಯದಲ್ಲಿ ಯಾರೂ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂಬ ನಂಬಿಕೆಯನ್ನು ಸೃಷ್ಟಿಸಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ( ಆರ್‌ಎಸ್‌ಎಸ್) ಮಹಿಳಾ ಘಟಕ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ರಾಮಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು .
‘ಹಿಂದೂ ಸಮಾಜದ ಸಂಘಟಿತ ಪ್ರಯತ್ನಗಳಿಂದಾಗಿ 500 ವರ್ಷಗಳ ಇತಿಹಾಸಕ್ಕೆ ಅಂಟಿದ್ದ ಕಳಂಕವನ್ನು ಅಳಿಸಿ ಹಾಕಿದೆ. ಇದು ಹೊಸ ಯುಗ ಪ್ರಾರಂಭದ ದಿಕ್ಸೂಚಿಯಂತೆ ಕಾಣುತ್ತಿದೆ. ಭಾರತದ ಆಂತರಿಕ ಪ್ರಜ್ಞೆಯು ಈಗ ಜಾಗೃತಗೊಂಡಿದೆ ಎಂದು ತೋರುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
'ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಸಮಿತಿಯು ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ ಅನ್ನು ಅಭಿನಂದಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.