ನವದೆಹಲಿ: ಗರ್ಭಿಣಿಯರಿಗೆ ಕೋವಿಡ್-19 ಲಸಿಕೆ ನೀಡಬಹುದು ಎಂದು ಹೇಳಿರುವ ಆರೋಗ್ಯ ಇಲಾಖೆಯು, ಅಗತ್ಯವಾಗಿ ನೀಡಲೇಬೇಕು ಎಂದೂ ತಿಳಿಸಿದೆ.
ಗರ್ಭಿಣಿ (ಮತ್ತು ಮಗು) ಮಾರಣಾಂತಿಕ ವೈರಸ್‌ನ ಸೋಂಕಿಗೆ ಒಳಗಾಗುವ ಆತಂಕಗಳು ವ್ಯಕ್ತವಾಗುತ್ತಿರುವ ನಡುವೆಯೇ ಆರೋಗ್ಯ ಇಲಾಖೆ ಈ ನಿರ್ದೇಶ ನೀಡಿದೆ.
'ಗರ್ಭಿಣಿಯರಿಗೆ ಲಸಿಕೆ ನೀಡಬಹುದು ಎಂದು ಸರ್ಕಾರದ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ. ಗರ್ಭಿಣಿಯರಿಗೆ ಲಸಿಕೆಯು ಉಪಯುಕ್ತವಾದದ್ದು. ಲಸಿಕೆಯನ್ನು ಅವರಿಗೆ ಅಗತ್ಯವಾಗಿ ನೀಡಬೇಕು‘ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಡಾ.ಬಲರಾಮ್ ಭಾರ್ಗವ ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ಮಾಹಿತಿ ನೀಡಿದ್ದಾರೆ.
ಇದಕ್ಕೂ ಹಿಂದೆ, ಗರ್ಭಿಣಿ, ಹಾಲುಣಿಸುವ ಮಹಿಳೆಯರು ಕೋವಿಡ್-19 ಲಸಿಕೆ ಪಡೆಯಬಾರದು ಎಂದು ಆರೋಗ್ಯ ಇಲಾಖೆ ಹೇಳಿತ್ತು. ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಲಸಿಕೆಯ ಕ್ಲಿನಿಕಲ್ ಟ್ರಯಲ್‌ನಲ್ಲಿ ಭಾಗಿಯಾಗಿರಲಿಲ್ಲ. ಹೀಗಾಗಿ ಅವರು ಲಸಿಕೆ ಪಡೆಯುವುದು ಬೇಡ ಎಂದು ಈ ಮೊದಲು ಹೇಳಲಾಗಿತ್ತು. ಆದರೆ, ಆರೋಗ್ಯ ಇಲಾಖೆಯು ತನ್ನ ನಿರ್ಧಾರವನ್ನು ಸದ್ಯ ಬದಲಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.