ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 53 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.
ಸಮಾಜವಾದಿ ಪಕ್ಷದ ದಿವಂಗತ ಮುಲಯಾಂ ಸಿಂಗ್, ತೆಲುಗು ಸಿನಿಮಾ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಸೇರಿದಂತೆ ರಾಜ್ಯದ ಸುಧಾ ಮೂರ್ತಿ, ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ‘ಪದ್ಮ’ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಸುಧಾ ಮೂರ್ತಿ ಹಾಗೂ ಭೈರಪ್ಪ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಕಾರ್ಯಕ್ರಮದಲ್ಲಿ ಮೂವರಿಗೆ ಪದ್ಮವಿಭೂಷಣ, ಐವರಿಗೆ ಪದ್ಮಭೂಷಣ ಹಾಗೂ 45 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು
ಜನವರಿ 25 ರಂದು 106 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿತ್ತು. ಕಳೆದ ಮಾರ್ಚ್ ತಿಂಗಳಲ್ಲಿ 53 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು.
ಉಪರಾಷ್ಟ್ರಪತಿ ಜಗದೀಪ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಕೇಂದ್ರ ಸಚಿವರು ಮತ್ತು ಇತರೆ ಅತಿಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.