ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಗುರುವಾರ) 66ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇಶಕ್ಕಾಗಿ ಅವರ ಅನುಕರಣೀಯ ಸೇವೆ ಮತ್ತು ಸಮರ್ಪಣೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ಬಡವರು ಮತ್ತು ಸಮಾಜದ ಅಂಚಿನಲ್ಲಿರುವವರ ಸೇವೆಗೆ ಒತ್ತು ನೀಡುವುದು ಮತ್ತು ಅವರ ಬುದ್ಧಿವಂತಿಕೆ ನಮಗೆ ಉತ್ತಮವಾದ ಮಾರ್ಗದರ್ಶಿ ಶಕ್ತಿಯಾಗಿದೆ. ಅವರ ಜೀವನ ಪಯಣ ಕೋಟ್ಯಂತರ ಜನರಿಗೆ ಭರವಸೆಯನ್ನು ನೀಡುತ್ತದೆ. ಅವರ ದಣಿವರಿಯದ ಪ್ರಯತ್ನಗಳು ಮತ್ತು ದೂರದೃಷ್ಟಿಯ ನಾಯಕತ್ವಕ್ಕಾಗಿ ದೇಶದ ಜನತೆ ಅವರಿಗೆ ಯಾವಾಗಲೂ ಕೃತಜ್ಞರಾಗಿರಬೇಕು. ಅವರಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯ ಭಾಗ್ಯ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಶುಭ ಹಾರೈಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪರವಾಗಿ, ನಾವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸುತ್ತೇವೆ. ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದೊರೆಯಲಿ ಎಂದು ನಾವು ಬಯಸುತ್ತೇವೆ. ದೇಶದ ಪ್ರಗತಿ, ಕಲ್ಯಾಣ ಮತ್ತು ನ್ಯಾಯಕ್ಕಾಗಿ ನಿಮ್ಮ ಸಹಜ ಬುದ್ಧಿವಂತಿಕೆ ಮತ್ತು ದೃಢವಾದ ಬದ್ಧತೆಯು ಎಲ್ಲಾ ಭಾರತೀಯರಿಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಲಿ ಎಂದು ಮಲ್ಲಿಕಾರ್ಜುನ ಖರ್ಗೆ ಶುಭ ಕೋರಿದ್ದಾರೆ.
ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ಮುಂದಿನ ಜೀವನಕ್ಕಾಗಿ ಶುಭಾಶಯಗಳನ್ನು ಕೋರುತ್ತೇನೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸಾರ್ವಜನಿಕ ಸೇವೆ, ಸಾರ್ವಜನಿಕ ಕಲ್ಯಾಣ ಮತ್ತು ಹಿಂದುಳಿದವರ ಉನ್ನತಿಗಾಗಿ ನಿಮ್ಮ ಸಮರ್ಪಣೆ ನಮಗೆ ಸ್ಫೂರ್ತಿ ನೀಡುತ್ತದೆ. ನಿಮ್ಮ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಜೆ. ಪಿ ನಡ್ಡಾ ಶುಭ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.