ADVERTISEMENT

Photos | ಸಾಧನೆಗೆ ಸಂದ ಗೌರವ: ನಾಲ್ವರು ಮಹನೀಯರಿಗೆ ‘ಭಾರತ ರತ್ನ’ ಪ್ರದಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮಾರ್ಚ್ 2024, 13:48 IST
Last Updated 30 ಮಾರ್ಚ್ 2024, 13:48 IST
<div class="paragraphs"><p>ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ&nbsp;ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ಮರಣೋತ್ತರವಾಗಿ&nbsp;ಶನಿವಾರ ಪ್ರದಾನ ಮಾಡಲಾಯಿತು.</p></div>

ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ಮರಣೋತ್ತರವಾಗಿ ಶನಿವಾರ ಪ್ರದಾನ ಮಾಡಲಾಯಿತು.

   

(ಪಿಟಿಐ ಚಿತ್ರ)

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌ‍ಪದಿ ಮುರ್ಮು ಅವರು ನಾಲ್ವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದರು.

ADVERTISEMENT

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಪರವಾಗಿ ಪುತ್ರ, ಜೆಡಿಯು ನಾಯಕ ರಾಮನಾಥ ಠಾಕೂರ್ ಪ್ರಶಸ್ತಿ ಸ್ವೀಕರಿಸಿದರು.

ಕೃಷಿ ವಿಜ್ಞಾನಿ ಡಾ. ಎಂ.ಎಸ್.ಸ್ವಾಮಿನಾಥನ್ ಪರವಾಗಿ ಪುತ್ರಿ ನಿತ್ಯಾ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಪರವಾಗಿ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಸಿಂಗ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪುತ್ರ ಪಿ.ವಿ.ಪ್ರಭಾಕರ ರಾವ್ ಪ್ರಶಸ್ತಿ ಸ್ವೀಕರಿಸಿದರು.

ಭಾರತ ರತ್ನ ಪ್ರದಾನ ಸಮಾರಂಭದಲ್ಲಿ  ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಪುತ್ರ ಜೆಡಿಯು ನಾಯಕ ರಾಮನಾಥ ಠಾಕೂರ್ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಸಿಂಗ್.

ಕೃಷಿ ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪರಸ್ಪರ ವಂದಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಭಾರತ ರತ್ನ ಪ್ರದಾನ ಸಮಾರಂಭದಲ್ಲಿ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್‌ ಅವರ ಪುತ್ರ ಪಿ.ವಿ ಪ್ರಭಾಕರ್‌ ರಾವ್‌, ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರ ಮೊಮ್ಮಗ ಜಯಂತ್‌ ಸಿಂಗ್, ಕೃಷಿ ವಿಜ್ಞಾನಿ ಎಂ.ಎಸ್‌ ಸ್ವಾಮಿನಾಥನ್‌ ಅವರ ಪುತ್ರಿ ನಿತ್ಯಾ ರಾವ್‌ ಮತ್ತು ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಪುತ್ರ ರಾಮನಾಥ್‌ ಠಾಕೂರ್‌ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.