ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಲ್ಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಭಾನುವಾರ ಒಳಗಾದರು.
‘ರಾಷ್ಟ್ರಪತಿ ತಮ್ಮ ಬಲಗಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು.ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿ ನಡೆಯಿತು ಮತ್ತು ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡರು’ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಮುರ್ಮು ಅವರು ಅಕ್ಟೋಬರ್ 16ರಂದು ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.