ADVERTISEMENT

ಪ್ರಮಾಣವಚನ: ಭಾರತದ ಆಹ್ವಾನ ಸ್ವೀಕರಿಸಿದ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ

ಪಿಟಿಐ
Published 7 ಜೂನ್ 2024, 14:40 IST
Last Updated 7 ಜೂನ್ 2024, 14:40 IST
ಮೊಹಮ್ಮದ್ ಮುಯಿಜು
ಮೊಹಮ್ಮದ್ ಮುಯಿಜು   

ಮಾಲೆ: ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

‘ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ಸಂಬಂಧಿಸಿದ ಆಹ್ವಾನವನ್ನು ಮುಯಿಜು ಸ್ವೀಕರಿಸಿದ್ದಾರೆ. ಸರ್ಕಾರದ ಇತರ ಕೆಲವು ಹಿರಿಯ ಅಧಿಕಾರಿಗಳೊಂದಿಗೆ ಅವರು ಶನಿವಾರ ನವದೆಹಲಿಗೆ ಪ್ರಯಾಣಿಸಲಿದ್ದಾರೆ’ ಎಂದು ಎಡಿಷನ್‌ ಡಾಟ್ ಎಂವಿ ವೆಬ್‌ಸೈಟ್‌ ವರದಿ ತಿಳಿಸಿದೆ.

ಆದರೆ ಭಾನುವಾರ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಮುಯಿಜು ಅವರ ಕಚೇರಿ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

ADVERTISEMENT

ಕಳೆದ ವರ್ಷದ ನವೆಂಬರ್‌ನಲ್ಲಿ ಮುಯಿಜು ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾಲ್ದೀವ್ಸ್‌ ಮತ್ತು ಭಾರತದ ನಡುವಣ ರಾಜತಾಂತ್ರಿಕ ಸಂಬಂಧದಲ್ಲಿ ಬಿಕ್ಕಟ್ಟು ತಲೆದೋರಿತ್ತು. 

ಪ್ರಚಂಡ ಭಾಗಿ (ಕಾಠ್ಮಂಡು ವರದಿ): ನೇಪಾಳ ಪ್ರಧಾನ ಮಂತ್ರಿ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಪ್ರಮಾಣವಚಣ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.