ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಗುರುವಾರ ಭಾಷಣ ಮಾಡಲಿದ್ದು, ನರೇಂದ್ರ ಮೋದಿ ಅವರ ಹೊಸ ಸರ್ಕಾರದ ಆದ್ಯತೆಗಳ ಬಗ್ಗೆ ಮಾತನಾಡುವ ಸಂಭವವಿದೆ.
ರಾಷ್ಟ್ರಪತಿಯವರು 18ನೇ ಲೋಕಸಭೆ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುತ್ತಿದ್ದಾರೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಸಭೆಯ 264ನೇ ಅಧಿವೇಶನವು ಜೂನ್ 27ರಂದು ಆರಂಭವಾಗಲಿದೆ.
ರಾಷ್ಟ್ರಪತಿ ಅವರು ತಮ್ಮ ಭಾಷಣದಲ್ಲಿ ನರೇಂದ್ರ ಮೋದಿ ಸರ್ಕಾರದ ಹತ್ತು ವರ್ಷಗಳ ನೀತಿಗಳ ಬಗ್ಗೆ, ಆರ್ಥಿಕತೆ, ರಕ್ಷಣೆ, ಆರೋಗ್ಯ ಸೇವೆ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ವಲಯಗಳಲ್ಲಿನ ಸಾಧನೆಗಳ ಬಗ್ಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.