ADVERTISEMENT

ಸಂವಿಧಾನಕ್ಕೆ 75 ವಸಂತ ಸಂಭ್ರಮಾಚರಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮುಂದಾಳತ್ವ

ಪಿಟಿಐ
Published 25 ನವೆಂಬರ್ 2024, 13:08 IST
Last Updated 25 ನವೆಂಬರ್ 2024, 13:08 IST
<div class="paragraphs"><p>ರಾಷ್ಟ್ರಪತಿ ದ್ರೌಪದಿ ಮುರ್ಮು&nbsp;</p></div>

ರಾಷ್ಟ್ರಪತಿ ದ್ರೌಪದಿ ಮುರ್ಮು 

   

ನವದೆಹಲಿ: ‘ಭಾರತದ ಸಂವಿಧಾನಕ್ಕೆ 75 ವರ್ಷ ತುಂಬಿದ ಸಂಭ್ರಮಾಚರಣೆಯ ಮುಂದಾಳತ್ವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಹಿಸಿಕೊಳ್ಳಲಿದ್ದಾರೆ’ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ಸಂಭ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ.

ADVERTISEMENT

‘ಸಂವಿಧಾನಕ್ಕೆ 75 ವರ್ಷ ತುಂಬಿದ ಈ ಸಂದರ್ಭದಲ್ಲಿ ವರ್ಷವಿಡಿ ಸಂಭ್ರಮಾಚರಣೆ ನಡೆಸುವ ಸಲುವಾಗಿಯೇ ವಿಶೇಷ ವೆಬ್‌ಸೈಟ್‌ ಅನ್ನು ರೂಪಿಸಲಾಗಿದೆ’ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಅರುನಿಷ್‌ ಚಾವ್ಲಾ ಪತ್ರಕರ್ತರಿಗೆ ಮಾಹಿತಿ ನೀಡಿದರು.

‘ಸಂವಿಧಾನದ ಪ್ರಸ್ತಾವನೆಯನ್ನು ಓದಿದ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡು, ಅದನ್ನು ಈ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬಹುದು. ಇದಕ್ಕೆ ಪ್ರಮಾಣಪತ್ರವನ್ನು ನೀಡಲಾಗುವುದು. ಜೊತೆಗೆ, ದೇಶದಾದ್ಯಂತ ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಸಾಮೂಹಿಕವಾಗಿ ವಾಚಿಸಲಿದ್ದಾರೆ’ ಎಂದರು.

‘ಇದೇ ಸಂದರ್ಭದಲ್ಲಿ ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗುವುದು’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.