ADVERTISEMENT

ಸಂಸತ್ತಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಟೊಳ್ಳು ಎಂದ ಮಾಯಾವತಿ

ಪಿಟಿಐ
Published 27 ಜೂನ್ 2024, 12:26 IST
Last Updated 27 ಜೂನ್ 2024, 12:26 IST
ಮಾಯಾವತಿ
ಮಾಯಾವತಿ   

ಲಖನೌ: ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ ಮಾಡಿದ ಸಾಧನೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ ಅವರು ಉಲ್ಲೇಖಿಸಿದ ಅಂಶಗಳು ವಾಸ್ತವಿಕತೆಗೆ ದೂರವಿದ್ದು, ಎಲ್ಲವೂ ಟೊಳ್ಳು(ಸುಳ್ಳು) ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಗುರುವಾರ ಹೇಳಿದ್ದಾರೆ.

ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದರು.

ಈ ಸಂಬಂಧ ‘ಎಕ್ಸ್‌ನಲ್ಲಿ‘ ಸರಣಿ ಪೋಸ್ಟ್‌ ಮಾಡಿರುವ ಮಾಯಾವತಿ, ಬಡತನ, ನಿರುದ್ಯೋಗ ಮತ್ತು ಸಮಾಜದ ದುರ್ಬಲ ವರ್ಗಗಳ ಕಲ್ಯಾಣದ ಕುರಿತಂತೆ ಕೇಂದ್ರ ಸರ್ಕಾರ ಹೆಚ್ಚಿನ ಆಸಕ್ತಿಯನ್ನು ಹೊಂದಿಲ್ಲ. ಮುಂದಿನ ಐದು ವರ್ಷ ಸರ್ಕಾರ ಕೈಗೊಳ್ಳುವ ಯೋಜನೆಗಳ ಬಗ್ಗೆ ಗಮನಹರಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ರಾಷ್ಟ್ರಪತಿ ಭಾಷಣದಲ್ಲಿ ಪರಸ್ಪರ ಆರೋಪ ಹೊರಿಸುವ ಬದಲು ಸಮಾಜದ ಜ್ವಲಂತ ಸಮಸ್ಯೆಗಳತ್ತ ಗಮನ ಸೆಳೆಯಬೇಕಿತ್ತು ಎಂದು ಮಾಯಾವತಿ ಹೇಳಿದ್ದಾರೆ.

ಕಳೆದ ಒಂದು ದಶಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಮಾಡಿದ ಸಾಧನೆಗಳನ್ನು ದ್ರೌಪದಿ ಮುರ್ಮು ಒತ್ತಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.