ನವದೆಹಲಿ: ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಅಂಗೀಕಾರ ಪಡೆದಿರುವ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಂಕಿತ ಹಾಕಿದ್ದಾರೆ.
ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ, ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ ಸರ್ಕಾರದ (ತಿದ್ದುಪಡಿ) ಮಸೂದೆಗಳಿಗೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ.
ಇವುಗಳಲ್ಲಿ ಎರಡು ಮಸೂದೆಗಳು ಕಾನೂನಾಗಿ ಪರಿವರ್ತನೆಗೊಂಡಿವೆ. ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ ಸರ್ಕಾರದ (ತಿದ್ದುಪಡಿ) ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಿದ್ದ ವೇಳೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.