ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಜಿ ಐಎಎಸ್ ಅಧಿಕಾರಿ ಪಿ.ಕೆ.ಮಿಶ್ರಾ ಹಾಗೂ ಪ್ರಧಾನ ಸಲಹೆಗಾರರನ್ನಾಗಿ ಸಂಪುಟದ ಮಾಜಿ ಕಾರ್ಯದರ್ಶಿ ಪಿ.ಕೆ.ಸಿನ್ಹಾ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.
ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ನೇಮಕಾತಿ ಸಮಿತಿ (ಎಸಿಸಿ) ಸಭೆಯಲ್ಲಿ ಈ ನೇಮಕಾತಿಗೆ ಅನುಮೋದನೆ ನೀಡಲಾಯಿತು.
ಪ್ರಸ್ತುತ, ಮಿಶ್ರಾ ಅವರು ಪ್ರಧಾನಿಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮೊದಲು ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ನೃಪೇಂದ್ರ ಮಿಶ್ರಾ ಅವರು ಆಗಸ್ಟ್ 30ರಂದು ರಾಜೀನಾಮೆ ಸಲ್ಲಿಸಿದ್ದರಿಂದ ಆ ಹುದ್ದೆ ತೆರವಾಗಿತ್ತು.
ಸಿನ್ಹಾ ಅವರನ್ನು ಕಳೆದ ತಿಂಗಳಷ್ಟೇ ಪ್ರಧಾನಿ ಕಚೇರಿಯಲ್ಲಿ ವಿಶೇಷ ಕರ್ತವ್ಯಾಧಿಕಾರಿಯಾಗಿ (ಒಎಸ್‌ಡಿ) ನೇಮಕ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.