ನವದೆಹಲಿ:ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇದೇ 30 ರ ಸಂಜೆ ಏಳು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೋದಿ ಮತ್ತು ಸಂಪುಟದ ಸಚಿವರಿಗೆರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.
ಬಿಜೆಪಿ ಮತ್ತು ಎನ್‌ಡಿಎಯ ನಾಯಕರಾಗಿ ಆಯ್ಕೆಯಾದ ಮೋದಿ ಅವರನ್ನು ರಾಷ್ಟ್ರಪತಿಯವರು ಶನಿವಾರ ಸಂಜೆಯೇಪ್ರಧಾನಿಯಾಗಿ ನಿಯೋಜಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಗಳಿಸಿದೆ. 543 ಸದಸ್ಯ ಬಲದ ಸಂಸತ್‌ನಲ್ಲಿ ಎನ್‌ಡಿಎ 353 ಸದಸ್ಯರನ್ನು ಹೊಂದಿದೆ.
2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವಾಗ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಸೇರಿ ನೆರೆ ರಾಜ್ಯಗಳ ಮುಖ್ಯಸ್ಥರು ಅತಿಥಿಗಳಾಗಿದ್ದರು. ಈ ಬಾರಿ ಯಾವ ದೇಶದ ಮುಖ್ಯಸ್ಥರಿಗೆ ಆಹ್ವಾನ ನೀಡಲಾಗಿದೆ ಎಂಬ ಅಧಿಕೃತ ಪ್ರಕಟಣೆ ಬಂದಿಲ್ಲ. ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಕಾರ್ಯಕ್ರಮಕ್ಕೆ ಬರುತ್ತಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.