ADVERTISEMENT

ಶ್ರೀರಾಮನವಮಿ: ನಾಡಿನ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಐಎಎನ್ಎಸ್
Published 30 ಮಾರ್ಚ್ 2023, 5:26 IST
Last Updated 30 ಮಾರ್ಚ್ 2023, 5:26 IST
ನರೇಂದ್ರ ಮೋದಿ
ನರೇಂದ್ರ ಮೋದಿ    

ನವದೆಹಲಿ: ಶ್ರೀರಾಮನವಮಿ ಹಬ್ಬದ ಪ್ರಯುಕ್ತ ನಾಡಿನಾದ್ಯಂತ ಇಂದು (ಗುರುವಾರ) ಸಂಭ್ರಮ ಮನೆಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನವಮಿ ಅಂಗವಾಗಿ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

‘ಎಲ್ಲರಿಗೂ ರಾಮನವಮಿಯ ಹಬ್ಬದ ಹಾರ್ದಿಕ ಶುಭಾಶಯಗಳು. ಭಗವಾನ್ ಶ್ರೀರಾಮನ ಜೀವನವು ತ್ಯಾಗ, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದೆ. ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘ಎಲ್ಲರಿಗೂ ರಾಮನವಮಿಯ ಹಬ್ಬದ ಹಾರ್ದಿಕ ಶುಭಾಶಯಗಳು. ಪುರುಷೋತ್ತಮ ಪ್ರಭು ಶ್ರೀರಾಮ, ಧರ್ಮ ಮತ್ತು ಸತ್ಯದ ಹಾದಿಯಲ್ಲಿ ನಡೆಯುವುದರೊಂದಿಗೆ ಇಡೀ ಮಾನವ ಜಗತ್ತಿಗೆ ಸಂದಿಗ್ಧ ಪರಿಸ್ಥಿತಿಗಳಲ್ಲಿ ಸಹ ತಾಳ್ಮೆ ಮತ್ತು ದಯೆಯ ಭಾವನೆಯನ್ನು ಹೊಂದಿರಲು ಕಲಿಸಿದ್ದಾರೆ. ಶ್ರೀರಾಮ ಎಲ್ಲರಿಗೂ ಆಶೀರ್ವಾದ ನೀಡಲಿ ಜೈ ಶ್ರೀ ರಾಮ್!’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ADVERTISEMENT

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ.
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ.
ನಿನ್ನಿಷ್ಟದಂತೆನ್ನ ಇಟ್ಟಿರುವೆ ರಾಮ.
ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ..

ನಾಡಿನ ಸಮಸ್ತ ಜನತೆಗೆ ಶ್ರೀ ಮರ್ಯಾದಾ ಪುರುಷೋತ್ತಮ, ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು. ಪ್ರಭು ರಾಮಚಂದ್ರ ಸರ್ವರ ಬಾಳಿನಲ್ಲಿ ಒಳಿತನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಶ್ರೀರಾಮನವಮಿ ಹಬ್ಬವಷ್ಟೇ ಅಲ್ಲ, ಕೆಡುಕನ್ನು ಸೋಲಿಸಿದ ಪ್ರತೀಕ, ಸುಳ್ಳಿನ ವಿರುದ್ಧ ಸತ್ಯ ಜಯಿಸಿದ ಸಂಕೇತ. ಸದಾಚಾರದ ಮಾರ್ಗವನ್ನು ಅನುಸರಿಸಲು, ಸಹಾನುಭೂತಿ, ಸಾಮರಸ್ಯದ ಬೆಳಕನ್ನು ತೋರುವ ಸತ್ಯದ ದಾರಿ. ಸರ್ವರನ್ನೂ ಸಮನಾಗಿ ಕಂಡ ಆ ಮರ್ಯಾದ ಪುರುಷೋತ್ತಮ ಶ್ರೀರಾಮ ದೇವರು ನಮ್ಮೆಲ್ಲರಿಗೂ ಆದರ್ಶ. ಎಲ್ಲರಿಗೂ ಶ್ರೀರಾಮ ನವಮಿ ಶುಭಾಶಯಗಳು ಎಂದು ಜಿಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿಯ ಶುಭಾಶಯಗಳು. ಪ್ರಜೆಗಳನ್ನು ದೇವರಂತೆ ಕಂಡ, ಸತ್ಯ ಮಾರ್ಗದಲ್ಲಿ ನಡೆದ ಪ್ರಭು ಶ್ರೀರಾಮನ ಅನುಗ್ರಹ ಸರ್ವರ ಮೇಲೂ ಇರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.