ADVERTISEMENT

ಶಾಲೆಯಲ್ಲಿ ನಮಾಜ್‌: ಪ್ರಾಂಶುಪಾಲರ ಅಮಾನತು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2023, 15:52 IST
Last Updated 22 ಅಕ್ಟೋಬರ್ 2023, 15:52 IST
<div class="paragraphs"><p>ನಮಾಜ್‌ </p></div>

ನಮಾಜ್‌

   

ಲಖನೌ (ಪಿಟಿಐ): ಶಾಲೆಯೊಂದರಲ್ಲಿ ಕೆಲವು ವಿದ್ಯಾರ್ಥಿಗಳು ನಮಾಜ್‌ ಮಾಡಿದ್ದಕ್ಕಾಗಿ ಮುಖ್ಯಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಇಲ್ಲಿನ ಠಾಕೂರ್‌ಗಂಜ್‌ ಪ್ರದೇಶದಲ್ಲಿನ ಶಾಲೆಯ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್‌ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ADVERTISEMENT

ಶಾಲಾ ಆಡಳಿತ ಮಂಡಳಿ ವಿರುದ್ಧ ಶನಿವಾರ ಕೆಲವು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ, ಈ ವಿಷಯದ ಕುರಿತಂತೆ ತನಿಖೆಗೆ ಆದೇಶಿಸಲಾಗಿತ್ತು.

‘ಇಲ್ಲಿನ ನೇಪಿಯರ್‌ ರಸ್ತೆಯ ಪ್ರಾಥಮಿಕ ಶಾಲೆಯಲ್ಲಿ ಬೋಧನಾ ಕಾರ್ಯ ಹೊರತುಪಡಿಸಿ ಇತರ ಚಟುವಟಿಕೆಗಳಲ್ಲಿ ಗುರುತಿಸಲಾಗದ ಕೆಲವು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಕೆಲವು ವಿದ್ಯಾರ್ಥಿಗಳು ಶುಕ್ರವಾರ ನಮಾಜ್ ಮಾಡಿದ್ದಾರೆ ಎಂಬುದನ್ನು ಶಿಕ್ಷಕರು ದೃಢಪಡಿಸಿದ್ದಾರೆ. ಇದು ಇಲಾಖೆಯ ನಿರ್ದೇಶನ ಮತ್ತು ಮಾರ್ಗಸೂಚಿಗೆ ವಿರುದ್ಧವಾಗಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಅರುಣ್‌ ಕುಮಾರ್ ಹೇಳಿಕೆ ನೀಡಿದ್ದಾರೆ.

’ಈ ಕುರಿತಂತೆ ಬ್ಲಾಕ್‌ ಶಿಕ್ಷಣ ಅಧಿಕಾರಿ ದಿನೇಶ್‌ ಕಟಿಯಾರ್‌ ತನಿಖೆ ನಡೆಸಿದ್ದಾರೆ‘ ಎಂದು ಕುಮಾರ್ ತಿಳಿಸಿದ್ದಾರೆ.

‘ಈ ತನಿಖಾ ವರದಿಯ ಆಧಾರದಲ್ಲಿ, ಉತ್ತರ ಪ್ರದೇಶ ಸರ್ಕಾರಿ ಸೇವಕ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು–1999ರಡಿ ಮುಖ್ಯ ಶಿಕ್ಷಕಿ ಮೀರಾ ಯಾದವ್‌ ಅವರನ್ನು ಶನಿವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಅವರು ಹೇಳಿದರು.

‘ಶಿಕ್ಷಕಿಯರಾದ ತೆಹ್ಜೀನ್‌ ಫಾತಿಮಾ, ಮಮತಾ ಮಿಶ್ರಾ ಈ ಕೃತ್ಯಕ್ಕೆ ಸಹಕರಿಸಿದ್ದು, ಈ ಇಬ್ಬರಿಗೂ ಕಠಿಣ ಎಚ್ಚರಿಕೆ ನೀಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.