ನವದೆಹಲ: ಕೇಂದ್ರದ ಮಾಜಿ ಸಚಿವ ಎಂ.ಜೆ. ಅಕ್ಬರ್ ವಿರುದ್ಧ ‘ಮೀಟೂ’ ಅಭಿಯಾನದಲ್ಲಿ ಲೈಂಗಿಕ ದುರ್ವರ್ತನೆ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿಗೆ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ನ್ಯಾಯಾಲಯದಲ್ಲಿ ಅಕ್ಬರ್ ಹೂಡಿದ್ದ ಮಾನನಷ್ಟ ಮೊಕದ್ದಮೆ ಆಧರಿಸಿ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮಾರ್ ವಿಶಾಲ್ ಫೆ.25ರಂದು ಹಾಜರಾಗುವಂತೆ ಈ ಸಮನ್ಸ್ ಹೊರಡಿಸಿದ್ದಾರೆ.
‘ಮೀಟೂ’ ಅಭಿಯಾನದಲ್ಲಿ ತಮ್ಮ ವಿರುದ್ಧ ಆರೋಪ ಬಂದ ಕಾರಣ ಕಳೆದ ವರ್ಷ ಅಕ್ಟೋಬರ್ 17ರಂದು ಅಕ್ಬರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
20 ವರ್ಷಗಳ ಹಿಂದೆ ಅಕ್ಬರ್ ಲೈಂಗಿಕ ದುರ್ವರ್ತನೆ ತೋರಿದ್ದರು ಎಂದು ರಮಣಿ ಆರೋಪಿಸಿದ್ದರು. ಈ ಆರೋಪವನ್ನು ಅಕ್ಬರ್ ತಳ್ಳಿಹಾಕಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.