ADVERTISEMENT

ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ಕಾಂಗ್ರೆಸ್‌ನ ಮುಂದಿನ ಸಿಎಂ ಅಭ್ಯರ್ಥಿ?

ಪಿಟಿಐ
Published 17 ಜುಲೈ 2021, 15:00 IST
Last Updated 17 ಜುಲೈ 2021, 15:00 IST
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ   

ಲಖನೌ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಗುರುತಿಸಿಕೊಳ್ಳುವೀರಾ ಎಂಬ ಪ್ರಶ್ನೆಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಿರಾಕರಿಸಿದ್ದಾರೆ.

ಅಲ್ಲದೆ ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆಯನ್ನು ತಳ್ಳಿ ಹಾಕಿದ್ದಾರೆ.

ಇಲ್ಲಿಗೆ ಎರಡು ದಿನಗಳ ಭೇಟಿ ಕೊಟ್ಟಿರುವ ಪ್ರಿಯಾಂಕಾ, ಜನ ಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ಪಕ್ಷ ಹೋರಾಟ ಮುಂದುವರಿಸಲಿದೆ ಎಂದಿದ್ದಾರೆ.

ADVERTISEMENT

ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವೀರಾ ಎಂದು ಕೇಳಿದಾಗ 'ನೋಡೋಣ' ಎಂದಷ್ಟೇ ಉತ್ತರಿಸಿದರು. ಉತ್ತರ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿಯೇ ಎಂದು ವಿಚಾರಿಸಿದಾಗ, 'ಎಲ್ಲವನ್ನೂ ಈಗಲೇ ಹೇಳಬೇಕೇ' ಎಂದು ಕೇಳಿದರು.

ಮಂಡಲ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೆ ಒಳಗಾಗಿದ್ದರು ಎನ್ನಲಾದ ಸಮಾಜವಾದಿ ಪಕ್ಷದ ಇಬ್ಬರು ಮಹಿಳಾ ಸದಸ್ಯರನ್ನು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭೇಟಿ ಮಾಡಿದರು.

ಲಖೀಂಪುರ ಖೇರಿಯ ಪಥ್‌ಗವಾ ಬ್ಲಾಕ್‌ನ ಸೆಮ್ರಾ ಗ್ರಾಮದಲ್ಲಿ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿದ ಪ್ರಿಯಾಂಕಾ ಮರು ಮತದಾನಕ್ಕೆಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.