ಅಮೃತಸರ: ಪಂಜಾಬ್‌ನ ವಿಶ್ವ ಪ್ರಸಿದ್ಧ ಸ್ವರ್ಣ ಮಂದಿರದಲ್ಲಿ ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಬೆಂಬಲಿಗರು ಭಾನುವಾರ ಖಲಿಸ್ತಾನ ಪರ ಘೋಷಣೆಗಳನ್ನು ಕೂಗಿದರು.
'ಆಪರೇಷನ್ ಬ್ಲೂಸ್ಟಾರ್' 37ನೇ ವರ್ಷಾಚರಣೆಯ ಭಾಗವಾಗಿ ಬೆಂಬಲಿಗರು ಧ್ವಜ ಹಾಗೂ ಭಿತ್ತಿಪತ್ರಗಳೊಂದಿಗೆ 'ಖಲಿಸ್ತಾನ ಜಿಂದಾಬಾದ್' ಎಂಬ ಘೋಷಣೆಗಳನ್ನು ಕೂಗಿದ್ದಾರೆ.
1984ನೇ ಇಸವಿಯಲ್ಲಿ ಸೈನ್ಯವು ಗೋಲ್ಡನ್ ಟೆಂಪಲ್‌ನಲ್ಲಿ ನಡೆಸಿದ ಆಪರೇಷನ್ ಬ್ಲೂಸ್ಟಾರ್‌ನಲ್ಲಿ ಸಿಖ್ಖ್ ಪ್ರತ್ಯೇಕತಾವಾದಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.
ನವದೆಹಲಿಯಲ್ಲಿ ಜನವರಿ 26ರಂದು ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಪ್ರತಿಭಟಿಸಿ ನಡೆದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಳಿಕ ಜಾಮೀನಿನ ಮೇರೆಗೆ ಬಿಡುಗಡೆಯಾಗಿರುವ ನಟ ಹಾಗೂ ಕಾರ್ಯಕರ್ತ ದೀಪ್ ಸಿಧು ಕೂಡಾ ಮಾಜಿ ಸಂಸದ ಸಿಮ್ರಾನ್‌ಜೀತ್ ಸಿಂಗ್ ಮನ್ ಜೊತೆ ಕಾಣಿಸಿಕೊಂಡಿದ್ದಾರೆ.
ರ‍್ಯಾಲಿ ಹಿನ್ನೆಲೆಯಲ್ಲಿ ಅಮೃತಸರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.