ADVERTISEMENT

ಕೋಲ್ಕತ್ತ: ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ ನಿವಾಸದ ಮೇಲೆ ಇ.ಡಿ ದಾಳಿ

ಪಿಟಿಐ
Published 6 ಸೆಪ್ಟೆಂಬರ್ 2024, 5:03 IST
Last Updated 6 ಸೆಪ್ಟೆಂಬರ್ 2024, 5:03 IST
<div class="paragraphs"><p>ಸಂದೀಪ್ ಘೋಷ್‌ </p></div>

ಸಂದೀಪ್ ಘೋಷ್‌

   

ಕೋಲ್ಕತ್ತ: ಆರ್‌.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಂದೀಪ್ ಘೋಷ್‌ ಅವರ ನಿವಾಸ ಹಾಗೂ ಅವರಿಗೆ ಸೇರಿದ್ದು ಎನ್ನಲಾದ ಎರಡು ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು ಶನಿವಾರ ಸಹ ತಪಾಸಣೆ ಮುಂದುವರೆದಿದೆ. 

ADVERTISEMENT

ಬೆಲ್ಘಟ್‌, ಹೌರಾ ಹಾಗೂ ಸುಭಾಶ್‌ಗ್ರಾಂ ಪಟ್ಟಣಗಳಲ್ಲಿ ಇ.ಡಿ. ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಏಕ ಕಾಲಕ್ಕೆ ದಾಳಿ ಮಾಡಿದ್ದರು. ದಾಳಿ ವೇಳೆ ದಾಖಲೆ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ. 

ಆರ್‌.ಜಿ. ಕರ್‌ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು.

ಸಂದೀಪ್ ಘೋಷ್‌ ಅವಧಿಯಲ್ಲಿ ಆರ್‌.ಜಿ. ಕರ್‌ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂದು ಅಲ್ಲಿನ ಮಾಜಿ ಅಧಿಕಾರಿಯೊಬ್ಬರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.