ಕೋಲ್ಕತ್ತ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಬಂಧನ ವಿಚಾರದಲ್ಲಿ ಸಿಬಿಐ ಅಧಿಕಾರಿಗಳು ನಡೆದುಕೊಂಡ ರೀತಿ ಮತ್ತು ಅವರನ್ನು ಬಂಧಿಸಿರುವ ಕ್ರಮದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋಲ್ಕತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ಕಾನೂನಿನ ವಿಚಾರಮಾತನಾಡುತ್ತಿಲ್ಲ, ಕೆಲವು ಸಂದರ್ಭಗಳಲ್ಲಿ ತನಿಖಾಧಿಕಾರಿಗಳ ನಡೆ ಸರಿಯಾಗಿರುವುದಿಲ್ಲ ಎಂದಿದ್ದಾರೆ. ಚಿದಂಬರಂ ಹಿರಿಯ ನಾಯಕರು ಹಾಗೇ ದೇಶದ ಹಣಕಾಸು ಸಚಿವರು ಮತ್ತುಗೃಹಸಚಿವರಾಗಿದ್ದರು. ಅವರ ವಿಚಾರದಲ್ಲಿ ತನಿಖಾಧಿಕಾರಿಗಳು ನಡೆದಕೊಂಡು ರೀತಿ ಸರಿಯಲ್ಲ ಎಂದು ಹೇಳಿದ್ದಾರೆ.
ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆಯ ಹಿಂಬಾಗಿಲಿನಿಂದ ಪ್ರವೇಶ ಮಾಡಿದ್ದು ಹಾಗೂ ಮನೆಯ ಕಾಂಪೌಂಡ್ ಗೋಡೆಗಳನ್ನು ಹತ್ತಿ ಮನೆಯೊಳಗೆ ಪ್ರವೇಶ ಮಾಡಿದ್ದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರದಲ್ಲಿ ಪಿ.ಚಿದಂಬರಂ ವಿದೇಶಿ ಕಂಪನಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪವಿದೆ.
ಇದನ್ನೂ ಓದಿ:ಚಿದಂಬರಂ, ಕಾರ್ತಿ ಹಾಗೂ ಐಎನ್‌ಎಕ್ಸ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.