ಫಿರೋಜಾಬಾದ್(ಉತ್ತರಪ್ರದೇಶ): ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ವಿರುದ್ಧ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಾಧ್ಯಾಪಕರೊಬ್ಬರು ನ್ಯಾಯಾಲಯದ ಮುಂದೆ ಶರಣಾಗಿದ್ದು, ಅವರನ್ನು ಜೈಲಿಗೆ ಕಳುಹಿಸಲಾಗಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನುರಾಗ್ ಕುಮಾರ್ ಅವರ ಮುಂದೆ ಶಹರ್ಯಾರ್ ಅಲಿ ಶರಣಾಗಿದ್ದು,ಅವರು ಮಂಗಳವಾರ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಧೀಶರು ಅರ್ಜಿ ತಿರಸ್ಕರಿಸಿ, ಅವರನ್ನು ಜೈಲಿಗೆ ಕಳುಹಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅಶ್ಲೀಲ ಪೋಸ್ಟ್ ಹಾಕಿದ್ದ ಆರೋಪದಡಿ ಫಿರೋಜಾಬಾದ್ ಪೊಲೀಸರು ಮಾರ್ಚ್‌ನಲ್ಲಿ ಶಹರ್ಯಾರ್ ಅಲಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಶಹರ್ಯಾರ್ ಅಲಿ ಅವರು ಎಸ್‌ಆರ್‌ಕೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಆದರೆ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಾಲೇಜು ಅವರಿಗೆ ಅಮಾನತು ನೋಟಿಸ್ ಜಾರಿಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.