ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಉಗ್ರರ ಸಹಚರ ಅಮೀರ್ ರಶೀದ್ ಲೋನ್‌ಗೆ ಸೇರಿದ ₹1 ಕೋಟಿ ಮೌಲ್ಯದ ಮನೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
‘ಬೊಮೈ ಪ್ರದೇಶದ ರಶೀದಾಬಾದ್‌ನಲ್ಲಿ ಅಮೀರ್‌ಗೆ ಸೇರಿದ ಎರಡು ಅಂತಸ್ತಿನ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸಂಬಂಧಪಟ್ಟ ಪ್ರಾಧಿಕಾರದ ಅನುಮತಿ ಪಡೆದು 1967ರ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ ಸೆಕ್ಷನ್ 25ರ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದರು.
‘ಈ ಕ್ರಮದಿಂದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಲು ಯತ್ನಿಸುವ ಹಾಗೂ ಭಯೋತ್ಪಾದಕರಿಗೆ ಬೆಂಬಲ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಸಂದೇಶ ರವಾನೆಯಾಗುತ್ತದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.