ನವದೆಹಲಿ:ಪ್ರವಾದಿ ಮಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರಿಗೆ ಜೀವ ಬೆದರಿಕೆ ಎದುರಾಗಿದ್ದು, ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ತಮಗೆ ಕಿರುಕುಳ ಹಾಗೂ ಬೆದರಿಕೆ ಇರುವ ಬಗ್ಗೆ ಮೇ 28ರಂದು ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದ ನೂಪುರ್, ಭದ್ರತೆ ಒದಗಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಅದರಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ದೂರಿನನ್ವಯಶರ್ಮಾ ಹಾಗೂ ಅವರ ಕುಟುಂಬಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರವಾದಿ ಮಹಮ್ಮದರ ಕುರಿತು ನೂಪುರ್ ನೀಡಿದ್ದ ಹೇಳಿಕೆಗಳು ವಿವಾದ ಸೃಷ್ಟಿಸಿದ್ದವು. ಹೀಗಾಗಿ ಅವರನ್ನು ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ಬಿಜೆಪಿ ಅಮಾನತು ಮಾಡಿತ್ತು.ಹಾಗೆಯೇ, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವಂತಹ ಪೋಸ್ಟ್‌ಗಳನ್ನುಸಾಮಾಜಿಕ ಮಾಧ್ಯಮಗಳಲ್ಲಿಹಂಚಿಕೊಂಡಿದ್ದದೆಹಲಿ ಬಿಜೆಪಿ ಘಟಕದ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರನ್ನೂ ಪಕ್ಷದಿಂದ ಉಚ್ಚಾಟಿಸಲಾಗಿತ್ತು.
ಇದೇ ವಿಚಾರವಾಗಿ ಅರಬ್ ರಾಷ್ಟ್ರಗಳೂ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದವು.
ಇವನ್ನೂ ಓದಿ
*ನೂಪುರ್ ಶರ್ಮಾ ಬಿಜೆಪಿಯಿಂದ ಅಮಾನತು, ನವೀನ್ ಕುಮಾರ್ ಜಿಂದಾಲ್ ಉಚ್ಚಾಟನೆ
*ನೂಪುರ್ ಶರ್ಮಾ ವಿವಾದ; 'ಪಕ್ಷ ಯಾವುದೇ ಧರ್ಮದ ವಿರೋಧಿ ಅಲ್ಲ'–ಬಿಜೆಪಿ ಪ್ರಕಟಣೆ
*ಪ್ರವಾದಿ ಮುಹಮ್ಮದ್ ಅವಹೇಳನ: ಬಿಜೆಪಿಯ ನೂಪುರ್ ಶರ್ಮಾ ವಿರುದ್ಧ ಪ್ರಕರಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.