ರಾಮನಗರ: ರೇಷ್ಮೆಗೂಡು ಧಾರಣೆ ಕುಸಿತ ಖಂಡಿಸಿ ರೈತರು ಇಲ್ಲಿನ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ಮುಂಭಾಗ ಶುಕ್ರವಾರ ಬೆಳಿಗ್ಗೆ ರಸ್ತೆ ತಡೆ ನಡೆಸಿದರು.
ಬೆಳಿಗ್ಗೆ 9.30ರ ಸುಮಾರಿಗೆಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ರೇಷ್ಮೆ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.
ಕಳೆದ ಕೆಲವು ದಿನಗಳಿಂದ ಗೂಡು ಧಾರಣೆ ಕುಸಿಯುತ್ತಲೇ ಇದೆ. ಸರ್ಕಾರ ನೀಡುವ ಪ್ರೋತ್ಸಾಹ ಧನ ಯಾವ ರೈತರನ್ನೂ ತಲುಪುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಸವರಾಜು ಸಮಿತಿ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಬೆಳಿಗ್ಗೆ 10ಕ್ಕೆ ಗೂಡು ಹರಾಜು ಪ್ರಕ್ರಿಯೆ ಆರಂಭಗೊಂಡ ಕಾರಣ ರೈತರು ಪ್ರತಿಭಟನೆ ಕೈಬಿಟ್ಟು ಮಾರುಕಟ್ಟೆಯ ಒಳನಡೆದರು. ಪ್ರತಿಭಟನೆಯಿಂದಾಗಿ ಕೆಲ ಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರವು ಅಸ್ತವ್ಯಸ್ತಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.