ADVERTISEMENT

ಅಳಿಯ ರಿಷಿ ಸುನಕ್‌ ಬಗ್ಗೆ ಹೆಮ್ಮೆಯಾಗುತ್ತಿದೆ: ನಾರಾಯಣಮೂರ್ತಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2022, 4:43 IST
Last Updated 25 ಅಕ್ಟೋಬರ್ 2022, 4:43 IST
ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ
ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ   

ನವದೆಹಲಿ: ಬ್ರಿಟನ್‌ ಪ್ರಧಾನಿ ಹುದ್ದೆಗೆ ಏರಿದ ರಿಷಿ ಸುನಕ್‌ ಅವರ ಬಗ್ಗೆ ಹೆಮ್ಮೆಯಾಗುತ್ತಿದೆ ಎಂದು ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಳಿಯನಿಗೆ ಉನ್ನತ ಸ್ಥಾನಕ್ಕೇರಿ ಇತಿಹಾಸ ಸಷ್ಟಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.

ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಗಂಡ, 42 ವರ್ಷದ ರಿಷಿ ಸುನಕ್‌ ಅವರು ಭಾನುವಾರ ಬ್ರಿಟನ್‌ನ ಆಡಳಿತರೂಢ ಕನ್ಸರ್ವೇಟಿವ್‌ ಪಕ್ಷದ ನಾಯಕತ್ವವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಆ ದೇಶದ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಬಿಳಿಯನಲ್ಲದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬ್ರಿಟನ್‌ ಜನತೆಗೆ ಉತ್ತಮವಾದುದ್ದನ್ನೇ ಮಾಡುತ್ತಾರೆ ಎಂಬ ಭರವಸೆ ನಮಗಿದೆ ಎಂದು ನಾರಾಯಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

2009ರಲ್ಲಿ ಅಕ್ಷತಾರನ್ನು ರಿಷಿ ವಿವಾಹವಾದರು. ದಂಪತಿಗೆ ಕೃಷ್ಣಾ ಮತ್ತು ಅನೂಷ್ಕಾ ಎಂಬ ಹೆಸರಿನ ಇಬ್ಬರು ಪುತ್ರಿಯರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.