ಮುಂಬೈ: ಲೈಂಗಿಕ ಅಲ್ಪಸಂಖ್ಯಾತರನ್ನು ಸಾಮಾನ್ಯರಂತೆ ಪರಿಗಣಿಸಬೇಕು. ಅವರಿಗೂ ವಿವಾಹ, ದತ್ತು, ಶಿಕ್ಷಣ, ಉದ್ಯೋಗ, ಆರೋಗ್ಯ ಮುಂತಾದ ನಾಗರಿಕ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಮನೋಶಾಸ್ತ್ರಜ್ಞರ ಕೇಂದ್ರ ಒಕ್ಕೂಟ ಹೇಳಿದೆ.
‘ಈ ಸಮುದಾಯವು ಮೇಲಿನ ಎಲ್ಲ ಸೌಲಭ್ಯ ಪಡೆಯುತ್ತಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಈ ತಾರತಮ್ಯವು ಅವರ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ’ ಎಂದು ಭಾರತೀಯ ಮನೋಶಾಸ್ತ್ರಜ್ಞರ ಸಮಾಜ (ಐಪಿಎಸ್) ಹೇಳಿಕೆಯಲ್ಲಿ ತಿಳಿಸಿದೆ.
‘ಸಲಿಂಗಿ ಕುಟುಂಬವು ಮಗುವನ್ನು ದತ್ತು ಪಡೆದರೆ ಸಮಾಜದಲ್ಲಿ ಹಲವಾರು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಇದನ್ನು ಕಾನೂನುಬದ್ಧಗೊಳಿಸಬೇಕು’ ಎಂದು ಮನವಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.