ADVERTISEMENT

ಸೇನಾ ಶಿಬಿರದಲ್ಲಿ ಹುತಾತ್ಮ ಯೋಧರಿಗೆ ನಮನ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 8:27 IST
Last Updated 15 ಫೆಬ್ರುವರಿ 2019, 8:27 IST
   

ಶ್ರೀನಗರ:ಜಮ್ಮು ಕಾಶ್ಮೀರದ ಶ್ರೀನಗರ–ಜಮ್ಮು ಹೆದ್ದಾರಿಯ ಅವಂತಿಪೋರಾ ಎಂಬಲ್ಲಿ ಗುರುವಾರ ಉಗ್ರರು ನಡೆಸಿದ ಸ್ಫೋಟದಲ್ಲಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರಗಳನ್ನು ಬುದ್‌ಗಾಂನಲ್ಲಿನ ಸಿಆರ್‌ಪಿಎಫ್‌ ಕ್ಯಾಂಪ್‌ನಲ್ಲಿ ಇರಿಸಿ ಗೌರವ ಸಲ್ಲಿಸಲಾಗಿದೆ.

ಶ್ರೀನಗರ–ಜಮ್ಮು ಹೆದ್ದಾರಿಯ ಅವಂತಿಪೋರಾ ಎಂಬಲ್ಲಿ ಗುರುವಾರ ಅಪರಾಹ್ನ 3.15ರ ಹೊತ್ತಿಗೆ ಉಗ್ರರು ಅತ್ಯಂತ ಘೋರ ಕೃತ್ಯ ಎಸಗಿದ್ದಾರೆ. ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ಗೆ ಜೈಷ್‌–ಎ–ಮೊಹಮ್ಮದ್‌ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊವನ್ನು ಡಿಕ್ಕಿ ಹೊಡೆಸಿದ್ದರಿಂದ 44 ಯೋಧರು ಹುತಾತ್ಮರಾಗಿದ್ದಾರೆ. ಬಸ್‌ನಲ್ಲಿ ಇದ್ದ ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ಯೋಧರ ಪಾರ್ಥಿವ ಶರೀರಗಳನ್ನು ಸೇನಾ ಕ್ಯಾಂಪ್‌ನಲ್ಲಿ ಇರಿಸಿ, ರಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಲಾಗಿದೆ. ಬಳಿಕ ಅವರ ಶರೀರಗಳನ್ನು ಅಂತ್ಯಕ್ರಿಯೆಗೆ ಕಳುಹಿಸಿಕೊಡಲಿದೆ.

ADVERTISEMENT

ಘಟನೆಗೆ ದೇಶವ್ಯಾಪಿ ತೀವ್ರ ಖಂಡನೆ ವ್ಯಕ್ತವಾಗಿದ್ದು, ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಸ್ಥಳೀಯ ನಾಗರಿಕರು ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ನಡೆದಿದ್ದಾರೆ.

ಶ್ರೀನಗರಕ್ಕೆ ರಾಜನಾಥ ಸಿಂಗ್
ಘಟನೆಯ ಸುದ್ದಿ ತಳಿದ ತಕ್ಷಣ ತಮ್ಮ ಇಂದಿನ ರ‍್ಯಾಲಿ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರು ಇಂದು ದೆಹಲಿಯಿಂದ ಶ್ರೀನಗರಕ್ಕೆ ತೆರಳಿದರು.

ದೆಹಲಿಯಲ್ಲಿನ ಪಾಕಿಸ್ತಾನ ಐ ಕಮಿಷನ್ ಕಚೇರಿ ಮುಂದೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಸ್ಫೋಟದ ತೀವ್ರತೆಗೆ ಛಿದ್ರಗೊಂಡಿರುವ ಬಸ್‌ –ರಾಯಿಟರ್ಸ್‌ ಚಿತ್ರ

* ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.