ನವದೆಹಲಿ:ಜಮ್ಮು ಮತ್ತು ಕಾಶ್ಮೀರದಪುಲ್ವಾಮಾದಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯ ಹಿನ್ನಲೆಯಲ್ಲಿ ಶುಕ್ರವಾರದಂದು ನಿಗದಿಯಾಗಿದ್ದ ರಾಜಕೀಯ ಕಾರ್ಯಕ್ರಮಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರದ್ದುಪಡಿಸಿದ್ದಾರೆ.
ಮಧ್ಯಪ್ರದೇಶದ ಇಟಾರ್ಸಿ ಹಾಗೂ ಧಾರ್‌ನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿವೆ. ಮಹಾರಾಷ್ಟ್ರದ ನಾಗ್ಪುರ ಮತ್ತು ಧುಲೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.
ದಾಳಿಯನ್ನು ಖಂಡಿಸಿದ್ದ ಮೋದಿ ಅವರು, ‘ಸಿಆರ್‌ಪಿಎಫ್ ಸಿಬ್ಬಂದಿಯ ಮೇಲಿನ ದಾಳಿಯು ತುಚ್ಛವಾದದ್ದದು.ಹಠಾತ್ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ‘ಧೀರ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಹುತಾತ್ಮ ಯೋಧರ ಕುಟುಂಬಗಳ ಜೊತೆ ಇಡೀ ದೇಶದ ಜನ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದ್ದಾರೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ’ ಎಂದೂ ಟ್ವೀಟ್ ಮಾಡಿದ್ದರು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೂ ತಮ್ಮ ಪೂರ್ವನಿಗದಿತ ರಾಜಕೀಯ ಕಾರ್ಯಕ್ರಮಗಳನ್ನು ರದ್ದುಪಡಿಸಿಕೊಂಡಿದ್ದಾರೆ.
ಇನ್ನಷ್ಟು ಸುದ್ದಿಗಳು
*ಕಾಶ್ಮೀರದ ಅವಂತಿಪೋರಾದಲ್ಲಿ ಉಗ್ರರ ದಾಳಿ: 44 ಯೋಧರು ಬಲಿ
*ಉಗ್ರರ ದಾಳಿ: ಮಂಡ್ಯ ಯೋಧ ಹುತಾತ್ಮ
*ಯೋಧರ ತ್ಯಾಗಕ್ಕೆ ಪ್ರತೀಕಾರ ಖಚಿತ
*‘ಉಗ್ರರ ತಂತ್ರಗಳಿಗೆ ಪ್ರತಿತಂತ್ರ ಹೆಣೆಯುವುದರಲ್ಲಿ ವಿಫಲವಾದದ್ದೇ ದಾಳಿಗೆ ಕಾರಣ’
*ದಾಳಿ ನಡೆಸಿದ ಉಗ್ರ ಸಂಘಟನೆ ಮುಖ್ಯಸ್ಥ ಅಜರ್ಗೆ ಪಾಕ್ನಲ್ಲಿ ಪೂರ್ಣ ಸ್ವಾತಂತ್ರ್ಯ
*ಪುಲ್ವಾಮಾ ದಾಳಿ ಪಾಕಿಸ್ತಾನ ‘ಹತಾಶೆ’ಯ ಫಲಿತಾಂಶ: ಸತ್ಯಪಾಲ್ ಮಲಿಕ್ ಹೇಳಿಕೆ
*‘ಪಾಕಿಸ್ತಾನ ನಾಶವಾಗದ ಹೊರತು, ವಿಶ್ವ ಶಾಂತಿ–ಪ್ರಾದೇಶಿಕ ಭದ್ರತೆ ಅಸಾಧ್ಯ’
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.