ADVERTISEMENT

ಪೋಶೆ ಕಾರು ಅಪಘಾತ ‍ಪ್ರಕರಣ: ಆರೋಪಿ ಬಾಲಕನ ಪೋಷಕರು ಜೂ.5ರವರೆಗೆ ಪೊಲೀಸ್ ಕಸ್ಟಡಿಗೆ

ಪಿಟಿಐ
Published 2 ಜೂನ್ 2024, 10:20 IST
Last Updated 2 ಜೂನ್ 2024, 10:20 IST
<div class="paragraphs"><p>ಪೋಶೆ ಕಾರು ಅಪಘಾತ</p></div>

ಪೋಶೆ ಕಾರು ಅಪಘಾತ

   

ಪಿಟಿಐ ಚಿತ್ರ

ಪುಣೆ: ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಕಾನೂನಿನ ಜೊತೆ ಸಂಘರ್ಷಕ್ಕೆ ಸಿಲುಕಿರುವ ಬಾಲಕನ ಪೋಷಕರನ್ನು ಸಾಕ್ಷ್ಯ ನಾಶಪಡಿಸಿದ ಪ್ರಕರಣದಲ್ಲಿ ಜೂನ್ 5 ರವರೆಗೆ ಪೊಲೀಸ್ ಕಸ್ಟಡಿಗೆ ಭಾನುವಾರ ಒಪ್ಪಿಸಲಾಗಿದೆ.

ADVERTISEMENT

ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು. ಕಾರು ಚಾಲನೆ ಮಾಡುತ್ತಿದ್ದ ಬಾಲಕ, ಪಾನಮತ್ತನಾಗಿದ್ದ ಎಂದು ಆರೋಪಿಸಲಾಗಿದೆ.

ಬಾಲಕನ ರಕ್ತದ ಮಾದರಿಯನ್ನು ಬದಲಿಸಿ ತನ್ನ ರಕ್ತದ ಮಾದರಿಯನ್ನು ಇರಿಸಿದ ಆರೋಪದಲ್ಲಿ, ಬಾಲಕನ ತಾಯಿ ಶಿವಾನಿ ಅಗರ್ವಾಲ್ ಅವರನ್ನು ಜೂನ್ 1 ರಂದು ಬಂಧಿಸಲಾಗಿದೆ. ಅಲ್ಲದೇ ಸಾಕ್ಷ್ಯ ನಾಶ ಹಾಗೂ ಅಪರಾಧದ ಹೊಣೆ ಹೊರುವಂತೆ ಕುಟುಂಬದ ಚಾಲಕನನ್ನು ಅಪಹರಿಸಿ, ಒತ್ತಡ ಹೇರಿದ ಆರೋಪದ ಮೇಲೆ ಬಾಲಕನ ತಂದೆ ಹಾಗೂ ಅಜ್ಜನನ್ನೂ ಬಂಧಿಸಲಾಗಿದೆ.

ಪ್ರಕರಣದಲ್ಲಿ ಬಂಧಿತರಾಗಿದ್ದ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಇಂದು ಇಬ್ಬರನ್ನು (ಬಾಲಕನ ಪೋಷಕರು) ಪೊಲೀಸರು ಪುಣೆ ನಗರದ ರಜಾ ಕಾಲದ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೂನ್ 5 ರವರೆಗೆ ಪೊಲೀಸ್ ಕಸ್ಟಡಿಗೆ ಕೋರಿದ್ದರು.

ಅಗರ್ವಾಲ್ ದಂಪತಿ ಸಂಚು ರೂಪಿಸಿ ಅಪಘಾತಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.