ಪುಣೆ: ಶಂಕಿತ ಉಗ್ರನೊಬ್ಬ ಮುಂಬೈನಲ್ಲಿ ಕಾರ್ಯಾಚರಿಸುತ್ತಿರುವುದಾಗಿ ಪುಣೆ ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ತಡರಾತ್ರಿ ಅಮೆರಿಕದಿಂದ ಕರೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಡರಾತ್ರಿ 1ರ ಸುಮಾರಿಗೆ ಕರೆ ಬಂದಿದೆ. ಕರೆ ಮಾಡಿದವರು ನಿರ್ದಿಷ್ಟವಾಗಿ ಒಬ್ಬ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದ್ದು, ಆತನನ್ನು ತಪಾಸಣೆ ನಡೆಸುವಂತೆ ಹೇಳಿದ್ದಾರೆ. ತಕ್ಷಣವೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪುಣೆ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮುಂಬೈನಲ್ಲಿದ್ದಾನೆ ಎನ್ನಲಾದ ಶಂಕಿತನ ಬಗ್ಗೆ ಅಮೆರಿಕದಿಂದ ಕರೆ ಬಂದಿರುವುದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಕರೆ ಮಾಡಿದ ವ್ಯಕ್ತಿ ಹಾಗೂ ಆತ ಆರೋಪ ಮಾಡಿರುವ ವ್ಯಕ್ತಿ ಇಬ್ಬರ ಸ್ಥಳಗಳನ್ನು ಪತ್ತೆ ಹಚ್ಚಲಾಗುವುದು ಎಂದು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.