ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಪಂಜಾಬ್ ಲೋಕ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ನಾಯಕರಾದ ನರೇಂದ್ರ ಸಿಂಗ್ ತೋಮರ್ ಹಾಗೂ ಕಿರಣ್ ರಿಜಿಜು ಸಮ್ಮುಖದಲ್ಲಿ ಅಮರಿಂದರ್ ಅವರು ಬಿಜೆಪಿ ಸೇರಿದರು. ಜತೆಗೆ, ತಮ್ಮ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಬಿಜೆಪಿ ಜತೆ ವಿಲೀನಗೊಳಿಸಿದರು.
ಕಳೆದ ವರ್ಷ ಪಂಜಾಬ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಬಳಿಕ ತಮ್ಮದೇ ಆದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದರು. ಆದರೆ ಅಮರಿಂದರ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಒಂದು ಸ್ಥಾನವನ್ನೂ ಗೆಲ್ಲುವಲ್ಲಿ ಸಫಲವಾಗಲಿಲ್ಲ. ಸಿಂಗ್ ಸ್ವ ಕ್ಷೇತ್ರ ಪಟಿಯಾಲ ನಗರದಲ್ಲಿ ಸೋಲನುಭವಿಸಿದ್ದರು.
ಬಿಜೆಪಿ ಹಾಗೂ ಶಿರೋಮಣಿ ಅಕಾಲಿ ದಳ ಜತೆ ಮೈತ್ರಿ ಮಾಡಿಕೊಂಡು ಅವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಅಮರಿಂದರ್ ಸಿಂಗ್ ಜತೆ ಪಂಜಾಬ್ ವಿಧಾನಸಭೆಯ ಮಾಜಿ ಉಪ ಸ್ಪೀಕರ್ ಅಜೈಬ್ ಸಿಂಗ್ ಭಟ್ಟಿ ಸಹ ಬಿಜೆಪಿ ಸೇರಿದರು.
ಬಿಜೆಪಿ ಸೇರುವ ಮುನ್ನ ಅಮರಿಂದರ್ ಸಿಂಗ್ ಅವರು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.