ಚಂಡೀಗಡ: ಪಂಜಾಬ್ ರಾಜ್ಯದ ತೋಟಗಾರಿಕಾ ಸಚಿವ ಫೌಜಾ ಸಿಂಗ್ ಸರಾರಿ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪತ್ರದಲ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ.
ಯೋಜನೆಯೊಂದರಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಅವರು ತಮ್ಮ ಆಪ್ತರು ಹಾಗೂ ಗುತ್ತಿಗೆದಾರರ ಬಳಿ ಮಾತನಾಡಿದ್ದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ವಿರೋಧ ಪಕ್ಷಗಳು ಫೌಜಾ ಸಿಂಗ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿದ್ದವು.
ಫೌಜಾ ಸಿಂಗ್ ವಿರುದ್ಧ ಆರೋಪ ಕೇಳಿಬಂದ ಕೆಲವು ತಿಂಗಳುಗಳ ಬಳಿಕ ಅವರ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.